ಮಾನ ಹಾನಿ ಪ್ರಕರಣ | ಶಿಕ್ಷೆಗೆ ತಡೆ ಕೋರಿದ್ದ ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್‌ ನ್ಯಾಯಾಲಯ

Date:

Advertisements
  • ಮಾರ್ಚ್ 23ಕ್ಕೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ
  • ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ ಅಮಾನತು ಮಾಡಿದ ಲೋಕಸಭೆ

ಮಾನಹಾನಿ ಪ್ರಕರಣದಲ್ಲಿ ವಿಧಿಸಿರುವ ಎರಡು ವರ್ಷ ಜೈಲು ಶಿಕ್ಷೆ ತಡೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ (ಏಪ್ರಿಲ್ 20) ಸೂರತ್ ನ್ಯಾಯಾಲಯ ತಿರಸ್ಕರಿಸಿದೆ.

‘ಮೋದಿ ಉಪನಾಮ’ ಟೀಕೆಗೆ ಸಂಬಂಧಿಸಿ 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ಇದಕ್ಕೆ ತಡೆ ಕೋರಿ ರಾಹುಲ್ ಅವರು ಸಲ್ಲಿಸಿದ ಅರ್ಜಿಯನ್ನು ಗುಜರಾತ್‌ನ ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿತು.

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸೂರತ್ ನ್ಯಾಯಾಲಯ 30 ದಿನಗಳ ಕಾಲ ಅವಕಾಶ ನೀಡಿತ್ತು. ಈ ಅವಧಿಯಲ್ಲಿ ಶಿಕ್ಷೆ ಅಮಾನತಿನಲ್ಲಿಟ್ಟಿತ್ತು.

Advertisements

ಶಿಕ್ಷೆ ಪ್ರಕಟಗೊಂಡ ಮಾರನೇ ದಿನ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು.

ಇದಕ್ಕೆ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೆ ರಾಹುಲ್ ಅವರ ಅನರ್ಹತೆಯನ್ನು ವಿರೋಧಿಸಿ ದೇಶದ ಅನೇಕ ಕಡೆ ವ್ಯಾಪಕ ಪ್ರತಿಭಟನೆ ನಡೆಸಲಾಯಿತು.

ಸೂರತ್ ಕೆಳಹಂತದ ನ್ಯಾಯಾಲಯ ವಿಧಿಸಿದ ಶಿಕ್ಷೆಯ ತೀರ್ಪಿಗೆ ತಡೆ ನೀಡುವಂತೆ ಮನವಿ ಮಾಡಿ ರಾಹುಲ್ ಗಾಂಧಿ ಅವರು ಏಪ್ರಿಲ್ 3 ರಂದು ಸೆಷನ್ಸ್ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆರ್. ಪಿ ಮೊಗೇರ ತಿರಸ್ಕರಿಸಿ ಆದೇಶಿಸಿದ್ದಾರೆ.

ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ದೊರೆತಿದ್ದರೆ ಅವರ ಸಂಸತ್ ಸದಸ್ಯತ್ವ ಮರುಸ್ಥಾಪನೆಯಾಗುವ ಅವಕಾಶವಿತ್ತು. ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಅವರ ವಕೀಲರು ಸೆಷನ್ಸ್ ನ್ಯಾಯಾಲಯದಲ್ಲಿ ಎರಡು ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯದ ಶಿಕ್ಷೆ ತಡೆ ಕೋರಿ ಒಂದು ಅರ್ಜಿ ಸಲ್ಲಿಕೆಯಾಗಿತ್ತು. ರಾಹುಲ್ ಅವರ ಮನವಿ ಇತ್ಯರ್ಥ ಆಗುವವರೆಗೆ ಶಿಕ್ಷೆ ಜಾರಿಗೆ ಅವಕಾಶ ನೀಡಬಾರದು ಎಂದು ಸೂರತ್‌ ನ್ಯಾಯಾಲಯ ಮೂಲಕ ಸಲ್ಲಿಸಲಾದ ಮತ್ತೊಂದು ಅರ್ಜಿಯಲ್ಲಿ ಕೋರಲಾಗಿತ್ತು.

2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಭಾಷಣ ಮಾಡಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.

ಈ ಸುದ್ದಿ ಓದಿದ್ದೀರಾ? ಅಜಿತ್‌ ಪವಾರ್‌ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಸರ್ಕಾರದಿಂದ ಹೊರಕ್ಕೆ; ಬಿಜೆಪಿಗೆ ಏಕನಾಥ್ ಶಿಂಧೆ ಬಣ ಎಚ್ಚರಿಕೆ

ಅದನ್ನು ಪ್ರಶ್ನಿಸಿ ಸೂರತ್ (ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್‌ ನ್ಯಾಯಾಲಯ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಾರ್ಚ್ 23ರಂದು ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು.

ನ್ಯಾಯಾಲಯದ ಈ ಆದೇಶದಿಂದ ರಾಹುಲ್‌ ಗಾಂಧಿ ಅವರು ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಮಾನಹಾನಿ ಪ್ರಕರಣದಲ್ಲಿ ಸೆಷನ್ಸ್‌ ನ್ಯಾಯಾಲಯ ತೀರ್ಪು ಮಹತ್ವ ಪಡೆದಿದೆ.

ಇದು ಮುಂಬರುವ 2024ರ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನ್ಯಾಯಾಲಯದ ತೀರ್ಮಾನದಿಂದ ರಾಹುಲ್‌ ಅವರು ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈ ಬಗ್ಗೆ ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X