ಚಂಡೀಗಢಕ್ಕೆ ಟ್ರಕ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ | ಚಾಲಕರೊಡನೆ ಮಾತುಕತೆ

Date:

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯಿಂದ ಚಂಡೀಗಢಕ್ಕೆ ಸೋಮವಾರ (ಮೇ 22) ರಾತ್ರಿ ಟ್ರಕ್‌ನಲ್ಲಿ ಸಂಚರಿಸಿ ಚಾಲಕರ ಮನವಿಯನ್ನು ಆಲಿಸಿದ್ದಾರೆ.

ಟ್ರಕ್‌ನಲ್ಲಿ ಸಂಚರಿಸುತ್ತ ಚಾಲಕರ ಜತೆ ಮಾತನಾಡಿ ಅವರ ಕಷ್ಟ ಸುಖಗಳಿಗೆ ಕಿವಿಯಾಗಿದ್ದಾರೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿದೆ. “ಟ್ರಕ್‌ ಚಾಲಕರೊಂದಿಗೆ ಜನ ನಾಯಕರಾಗಿರುವ ರಾಹುಲ್‌ ಗಾಂಧಿ ತೆರಳಿ ಅವರ ಕಷ್ಟಗಳನ್ನು ಆಲಿಸುತ್ತ ದೆಹಲಿಯಿಂದ ಚಂಡೀಗಢವರೆಗೆ ಪ್ರಯಾಣಿಸಿದರು. ಮಾಧ್ಯಮಗಳ ವರದಿ ಪ್ರಕಾರ ಭಾರತದಲ್ಲಿ ಸುಮಾರು 90 ಲಕ್ಷ ಟ್ರಕ್‌ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಂಕಷ್ಟಗಳಿವೆ. ಅವರ ಮನದ ಮಾತನ್ನು ರಾಹುಲ್‌ ಅವರು ಆಲಿಸಿದ್ದಾರೆ” ಎಂದು ಬರೆದುಕೊಂಡಿದೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸಿರುವ ವಿಡಿಯೋವನ್ನು ಸಹ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ರಾಹುಲ್‌ ಅವರು ಟ್ರಕ್‌ ಚಾಲಕರೊಂದಿಗೆ ಮಾತನಾಡುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

ರಾಹುಲ್‌ ಅವರು ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಬ್ಲಿಂಕಿಟ್ ಡೆಲಿವರಿ ಎಕ್ಸಿಕ್ಯೂಟಿವ್ ಜೊತೆ ಸವಾರಿ ಮಾಡಿದ್ದರು.

ಈ ವೇಳೆ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದರು. ಸಾಮಾನ್ಯರಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ, ಎಲ್ಲರೊಂದಿಗೆ ಬೆರೆತು ಮಾತುಕತೆಯಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು "ನುಸುಳುಕೋರರಿಗೆ" ಹಂಚಲಿದೆ...

ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ...