ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

Date:

ಅಸ್ಪೃಶ್ಯತೆಯನ್ನು ಉತ್ತೇಜಿಸುವ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ದೇಶದ ದಲಿತರನ್ನು ಅಪ್ಪಿಕೊಳ್ಳುತ್ತಾರೆಯೇ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ.

ಗೆಹ್ಲೋಟ್ ಅವರು ಬರಾನ್ ಜಿಲ್ಲೆಯಲ್ಲಿ ಹಿಂದೂ ಸಮುದಾಯದ 2,111 ಹಾಗೂ  ಮುಸ್ಲಿಂ ಸಮುದಾಯದ 111 ಜೋಡಿಗಳು ಸೇರಿದಂತೆ 2,222 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಹಾಗೂ ಆರೆಸ್ಸೆಸ್‌ನವರು ಭಿನ್ನಾಭಿಪ್ರಾಯ ಮತ್ತು ತಾರತಮ್ಯವನ್ನು ಸೃಷ್ಟಿಸುತ್ತಾರೆ ಹಾಗೂ ಹರಡುತ್ತಾರೆ. ದೇಶದ ಜನರಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಾರೆ ಎಂದು ಆರೋಪಿಸಿದರು.

“ಅವರು (ಬಿಜೆಪಿ-ಆರ್‌ಎಸ್‌ಎಸ್) ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಾರೆ ಮತ್ತು ಅವರೆಲ್ಲರೂ ಹಿಂದೂಗಳು ಆದರೆ ಅವರು ಧರ್ಮಕ್ಕಿಂತ ಮೇಲೇರಬೇಕು ಮತ್ತು ಕೆಲವು ನೈಜ ಕೆಲಸ ಮಾಡಬೇಕು” ಎಂದು ಗೆಹ್ಲೋಟ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕವಿ ಮೊಹಮ್ಮದ್ ಇಕ್ಬಾಲ್ ಪಠ್ಯಕ್ರಮ ಸ್ಥಗಿತಕ್ಕೆ ದೆಹಲಿ ವಿವಿ ನಿರ್ಣಯ

“ಅಸ್ಪೃಶ್ಯತೆ ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈಗಲೂ ತಾಂಡವವಾಡುತ್ತಿದೆ. ಕೆಳವರ್ಗದವರ ವಿರುದ್ಧ ತಾರತಮ್ಯವಿದೆ. ಇದು ಎಲ್ಲರಿಗೂ ತಿಳಿದಿರುವ ವಿಷಯ. ಆರೆಸ್ಸೆಸ್  ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ  ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ ಕಲ್ಯಾಣಕ್ಕಾಗಿ ತಮ್ಮ ಅಲ್ಪಾವಧಿ ಹಾಗೂ  ದೀರ್ಘಕಾಲೀನ ಯೋಜನೆಗಳನ್ನು ಬಹಿರಂಗಪಡಿಸಬೇಕು” ಎಂದು ಗೆಹ್ಲೋಟ್ ಒತ್ತಾಯಿಸಿದರು.

“ದಲಿತರನ್ನು ಯಾರು ನೋಡಿಕೊಳ್ಳುತ್ತಿದ್ದಾರೆ? ನೀವು (ಬಿಜೆಪಿ-ಆರೆಸ್ಸೆಸ್) ಅವರಿಗಾಗಿ ಏನು ಮಾಡುತ್ತಿದ್ದೀರಿ, ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ? ಈ ಪ್ರಶ್ನೆಗಳಿಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಉತ್ತರಿಸಬೇಕು” ಎಂದು ಅಶೋಕ್ ಗೆಹ್ಲೋಟ್ ಹೇಳಿದರು.

ಕಳೆದ ತಿಂಗಳು ರಾಜ್ಯದ ಬಾರ್ಮರ್ ಜಿಲ್ಲೆಯಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಬೆಂಕಿ ಹಚ್ಚಿದ ನಂತರ ವಿಪಕ್ಷಗಳಿಂದ ಸರ್ಕಾರಕ್ಕೆ ಟೀಕೆ ವ್ಯಕ್ತವಾಗಿತ್ತು. ನಂತರ ಕೃತ್ಯವೆಸಗಿದ ಶಕೂರ್ ಎಂಬಾತನನ್ನು ಬಂಧಿಸಲಾಗಿತ್ತು.  ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...