ಮದುವೆಗಳ ನೆಪ; ರಾಜಸ್ಥಾನ ಚುನಾವಣಾ ದಿನಾಂಕ ಬದಲಿಸಿದ ಚುನಾವಣಾ ಆಯೋಗ

Date:

Advertisements

ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನವೆಂಬರ್ 23 ರ ಬದಲಿಗೆ ನವೆಂಬರ್ 25 ರಂದು ಒಂದೇ ಹಂತದಲ್ಲಿ ಮತದಾನವನ್ನು ನಡೆಸಲಿದೆ. ಫಲಿತಾಂಶವು ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ.

ನವೆಂಬರ್‌ 23ರಂದು ರಾಜ್ಯಾದ್ಯಂತ ಮದುವೆಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಚುನಾವಣಾ ಆಯೋಗವು ದಿನಾಂಕವನ್ನು ಪರಿಷ್ಕರಿಸಿರುವುದಾಗಿ ತಿಳಿಸಿದೆ.

“ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳಿಂದ ಆಯೋಗವು ಮನವಿಯನ್ನು ಸ್ವೀಕರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಜನರಿಗೆ ಅನಾನುಕೂಲತೆಯನ್ನು ಉಂಟುಮಾಡುವ ದೊಡ್ಡ ಪ್ರಮಾಣದ ಮದುವೆ, ಸಾಮಾಜಿಕ ಕಾರ್ಯಕ್ರಮಗಳನ್ನು ಪರಿಗಣಿಸಿ ಮತದಾನದ ದಿನಾಂಕ ಬದಲಾವಣೆ ಮಾಡಲಾಗಿದೆ. ಅಂದು ಮತದಾನ ನಡೆದರೆ ವಿವಿಧ ಕಾರ್ಯಕ್ರಮಗಳಲ್ಲಿ ಜನರು ಪಾಲ್ಗೊಂಡು ಮತದಾನ ಪ್ರಮಾಣ ಕಡಿಮೆಯಾಗಬಹುದು” ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | 13 ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಲೆ; ದೂರು ದಾಖಲಿಸಲು ಪೊಲೀಸರ ನಿರ್ಲಕ್ಷ್ಯ

ರಾಜಸ್ಥಾನ 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ರಾಜಸ್ಥಾನ ವಿಧಾನಸಭೆಯ ಅವಧಿಯು ಜನವರಿ 14, 2024 ರಂದು ಕೊನೆಗೊಳ್ಳುತ್ತದೆ. ಪ್ರಸ್ತುತ, ರಾಜ್ಯದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದೆ.

ಡಿಸೆಂಬರ್ 7, 2018 ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಯಿತು. ಕಾಂಗ್ರೆಸ್ 100 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿ 73 ಸ್ಥಾನಗಳನ್ನು ಗಳಿಸಿತ್ತು.

ಬಿಎಸ್‌ಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರವನ್ನು ರಚಿಸಿತು. ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಸಚಿನ್ ಪೈಲಟ್ ಉಪ ಮುಖ್ಯಮಂತ್ರಿಯಾದರು.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X