ಹೆಸರಾಂತ ವ್ಯಂಗ್ಯಚಿತ್ರಕಾರ ಅಜಿತ್ ನಿನಾನ್‌ ಮೈಸೂರಿನಲ್ಲಿ ನಿಧನ

Date:

Advertisements

ತಮ್ಮ ಅತ್ಯುತ್ತಮ ವ್ಯಂಗ್ಯಚಿತ್ರಗಳಿಂದ ಜಾಗತಿಕ ಮನ್ನಣೆ ಪಡೆದಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಅಜಿತ್ ನಿನಾನ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ನಿನಾನ್ ಪತ್ನಿ, ಇಬ್ಬರು ಪುತ್ರಿಯರು ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ: ಡಿಎಂಕೆ ಸಚಿವರ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Advertisements

ಕಳೆದ ಎರಡು ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ ನಿನಾನ್ ಮನೆಯಲ್ಲಿ ಒಬ್ಬರೆ ಇದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಪತ್ನಿ ಗೋವಾದಲ್ಲಿರುವ ತಮ್ಮ ಮಗಳ ಮನೆಗೆ ಹೋಗಿದ್ದರು.

ಟೈಮ್ಸ್ ಆಫ್ ಇಂಡಿಯಾದ ‘ನಿನಾನ್ಸ್ ವರ್ಲ್ಡ್’ ಕಾರ್ಟೂನ್ ಸರಣಿ, ‘ಇಂಡಿಯಾ ಟುಡೆ’ ನಿಯತಕಾಲಿಕೆಯಲ್ಲಿ ‘ಸೆಂಟರ್ ಸ್ಟೇಜ್‌’ ಮೂಲಕ ಅಜಿತ್ ನಿನಾನ್ ಪ್ರಸಿದ್ದಿ ಪಡೆದಿದ್ದರು. ಖ್ಯಾತ ವ್ಯಂಗ್ಯಚಿತ್ರಕಾರ ಅಬು ಅಬ್ರಹಾಂ ಅವರ ಸೋದರಳಿಯನಾಗಿದ್ದ ನಿನಾನ್, ಶಾಲೆಯಲ್ಲಿದ್ದಾಗ 1960ರ ದಶಕದಲ್ಲಿ ಅವರ ಮೊದಲ ಕಾರ್ಟೂನ್ ಪ್ರಕಟಿಸಿದ್ದರು.

ರಾಜಕೀಯದ ಹೊರತಾಗಿ, ಅಜಿತ್ ನಿನಾನ್ ಸಾಮಾಜಿಕ ಸಮಸ್ಯೆಗಳು ಮತ್ತು ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿ ವ್ಯಂಗ್ಯಮಿಶ್ರಿತ ರೀತಿಯಲ್ಲಿ ತಿಳಿಸುತ್ತಿದ್ದರು. ಕುಟುಂಬದ ಬಜೆಟ್ ನಿರ್ವಹಿಸುವ ಮತ್ತು ಹೆಚ್ಚು ಜಾಗತೀಕರಣಗೊಂಡ ಸಮಾಜದಲ್ಲಿ ಮಕ್ಕಳನ್ನು ಬೆಳೆಸುವ ಕೆಲವು ಸಾರ್ವತ್ರಿಕ ಒತ್ತಡಗಳ ಬಗ್ಗೆ ವ್ಯಂಗ್ಯಚಿತ್ರಗಳ ಮೂಲಕವೇ ಅಜಿತ್‌ ತಿಳಿಸುತ್ತಿದ್ದರು.

Ajith ninan 1

“ಇದು ನಂಬಲಸಾಧ್ಯವಾದ ಸುದ್ದಿ! ದಿಗ್ಗಜ ವ್ಯಂಗ್ಯಚಿತ್ರಕಾರ ಅಜಿತ್ ನಮ್ಮನ್ನು ಅಗಲಿದ್ದಾರೆ. ಕಳೆದ ವರ್ಷ ನಾವು ಅವರಿಗೆ ಭಾರತೀಯ ಕಾರ್ಟೂನ್ ಗ್ಯಾಲರಿಯಲ್ಲಿ ಪ್ರತಿಷ್ಠಿತ ಬಾರ್ಟನ್ ಜೀವಮಾನ ಸಾಧನೆ ಪ್ರಶಸ್ತಿ 2022 ನೀಡಿ ಗೌರವಿಸಿದ್ದೆವು. ಅವರ ಕುಟುಂಬಕ್ಕೆ ಸಂತಾಪಗಳು” ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನಿಸ್ಟ್ ಟ್ವೀಟ್ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X