ಪಂಜಾಬ್‌ ಮಾಜಿ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್‌ ಬಾದಲ್‌ ನಿಧನ

Date:

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಪಂಜಾಬ್‌ನ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

95 ವರ್ಷದ ಬಾದಲ್‌ 5 ಬಾರಿ ಮುಖ್ಯಮಂತ್ರಿಯಾಗಿದ್ದರು. ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಭಾನುವಾರ ಖಾಸಗಿ ಆಸ್ಪತ್ರೆಗೆ ಬಾದಲ್‌ ಅವರನ್ನು ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. 

ಬಾದಲ್ ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

30ನೇ ವಯಸ್ಸಿನಲ್ಲಿ ಶಾಸಕರಾಗಿದ್ದ ಬಾದಲ್‌, 43ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿ ಹುದ್ದೆಗೇರಿದ್ದರು. ಅತೀ ಕಿರಿಯ ವಯಸ್ಸಿನಲ್ಲಿಯೇ ಪಂಜಾಬ್‌ ಸಿಎಂ ಆಗಿದ್ದ ಹೆಗ್ಗಳಿಕೆ ಬಾದಲ್‌ ಅವರದು.

ಬಾದಲ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...