ವೀಲ್ ಚೇರ್ ಅಭಾವ; ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್​ನಲ್ಲೇ ಕರೆದೊಯ್ದ ತಂದೆ!

Date:

ವೀಲ್‌ ಚೇರ್‌ ಸಿಗದ ಕಾರಣ ಕೋಪಗೊಂಡ ತಂದೆ, ಕಾಲು ಮುರಿತಕ್ಕೊಳಗಾಗಿದ್ದ ಮಗನನ್ನು ಸ್ಕೂಟಿಯಲ್ಲೇ ಆಸ್ಪತ್ರೆಯ ಮೂರನೇ ಮಹಡಿಗೆ ಚಿಕಿತ್ಸೆಗೆ ಕರೆದುಕೊಂಡ ಹೋದ ಅಪರೂಪದ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಕೋಟಾದ ಅತಿದೊಡ್ಡ ಎಂಬಿಎಸ್‌ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಆಗಿದ್ದೇನು?

ವೃತ್ತಿಯಲ್ಲಿ ವಕೀಲರಾಗಿರುವ ಮನೋಜ್ ಜೈನ್ ಎಂಬುವವರು, ಎಡಗಾಲು ಮುರಿತಕ್ಕೆ ಒಳಗಾಗಿ ಪ್ಲಾಸ್ಟರ್‌ ಹಾಕಿಸಿಕೊಂಡಿದ್ದ ತನ್ನ ಮಗನನ್ನು ಚಿಕಿತ್ಸೆಗಾಗಿ ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಎಂಬಿಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯ ಮಂಭಾಗದಲ್ಲಿ ವೀಲ್‌ ಚೇರ್‌ ಅಥವಾ ಸ್ಟ್ರೆಚರ್‌ ಒದಗಿಸುವಂತೆ ಕೇಳಿದ್ದಾರೆ. ಆದರೆ ಈ ವೇಳೆ ಸಿಬ್ಬಂದಿ ಉಡಾಫೆಯಿಂದ ಉತ್ತರಿಸಿದ್ದು, ಮನೋಜ್ ಜೈನ್‌ರನ್ನು ಸಿಟ್ಟಿಗೇಳುವಂತೆ ಮಾಡಿತ್ತು.

ತುಂಬಾ ಹೊತ್ತು ಕಾದ ಬಳಿಕ, ತಾನು ಬಂದಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ನಲ್ಲೇ ನೇರವಾಗಿ ಆಸ್ಪತ್ರೆಯ ಒಳಗೆ ತೆರಳಿದ ಜೈನ್‌, ಬಳಿಕ ಮೂರನೇ ಮಹಡಿಯಲ್ಲಿರುವ ಒಪಿಡಿ ವಿಭಾಗಕ್ಕೆ ಲಿಫ್ಟ್‌ನಲ್ಲಿ ಸ್ಕೂಟರ್‌ನಲ್ಲೇ ತೆರಳಿ ಚಿಕಿತ್ಸೆ ಕೊಡಿಸಿದ್ದಾರೆ.

ವಾಗ್ವಾದ

ಚಿಕಿತ್ಸೆ ಪಡೆದು ಮತ್ತೆ ಸ್ಕೂಟರ್‌ನಲ್ಲೇ ಲಿಫ್ಟ್‌ ಬಳಿ ತೆರಳುತ್ತಿದ್ದ ಅಪ್ಪ-ಮಗನನ್ನು ಆಸ್ಪತ್ರೆಯ ಒಪಿಡಿ ವಿಭಾಗದ ವಾರ್ಡ್ ಉಸ್ತುವಾರಿ ದೇವಕಿನಂದ್ ತಡೆದಿದ್ದು,  ಸ್ಕೂಟಿಯ ಕೀಯನ್ನು ಕಿತ್ತುಕೊಂಡಿದ್ದಾರೆ.  ಈ ವೇಳೆ ಮನೋಜ್ ಜೈನ್ ಮತ್ತು ದೇವಕಿನಂದ್ ನಡುವೆ ಮಾತಿನ ಚಕಮಕಿ ನಡೆದಿದೆ.

ʻನಾನು ಯಾವುದೇ ತಪ್ಪು ಮಾಡಿಲ್ಲ, ಗಾಲಿಕುರ್ಚಿ ಇಲ್ಲದ ಕಾರಣ, ಮೂರನೇ ಮಹಡಿಗೆ ಸ್ಕೂಟರ್‌ನಲ್ಲಿ ತೆರಳಲು ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಅನುಮತಿ ಪಡೆದಿದ್ದೆʼ ಎಂದು ಜೈನ್‌ ಹೇಳಿದ್ದಾರೆ.  ಆಸ್ಪತ್ರೆಯ ಅಸಮರ್ಪಕ ನಿರ್ವಹಣೆ ಮತ್ತು ಅವ್ಯವಸ್ಥೆಗಳಿಂದಾಗಿ ಈ ಘಟನೆ ನಡೆದಿದೆ ಎಂದಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ದೇವಕಿನಂದ್ ʻಆಸ್ಪತ್ರೆಯಲ್ಲಿ ಒಪಿಡಿ ವಿಭಾಗವನ್ನು ವಿಸ್ತರಿಸಲಾಗಿದ್ದು, ಪ್ರತಿನಿತ್ಯ ಸುಮಾರು ಮೂರ ಸಾವಿರ ರೋಗಿಗಳು ಇಲ್ಲಿಗೆ ಬರುತ್ತಾರೆ. ಆದರೆ ಸಾಕಷ್ಟು ಸಂಖ್ಯೆಯ ಗಾಲಿಕುರ್ಚಿಗಳು ಇಲ್ಲಿಲ್ಲ. ಶೀಘ್ರದಲ್ಲೇ ವ್ಯವಸ್ಥೆಗೊಳಿಸಲಾಗುವುದುʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP)...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ...