ಭೀಮಾ ಕೋರೆಗಾಂವ್‌ ಪ್ರಕರಣ: ಸಾಮಾಜಿಕ ಹೋರಾಟಗಾರರಾದ ಗೊನ್ಸಾಲ್ವಸ್, ಫೆರೇರಾಗೆ ಜಾಮೀನು

Date:

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷದಿಂದ ಬಂಧನದಲ್ಲಿದ್ದ ಸಾಮಾಜಿಕ ಹೋರಾಟಗಾರರಾದ ವರ್ನಾನ್ ಗೊನ್ಸಾಲ್ವಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಜುಲೈ 28) ಜಾಮೀನು ಮಂಜೂರು ಮಾಡಿದೆ.

- Advertisement -

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಇಬ್ಬರು ಮಹಾರಾಷ್ಟ್ರ ತೊರೆಯಬಾರದು ಹಾಗೂ ಪಾಸ್‌ಪೋರ್ಟ್‌ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇಬ್ಬರಿಗೂ ತಲಾ ಒಂದು ಮೊಬೈಲ್ ಬಳಸಲು ಅನುಮತಿಸಲಾಗಿದ್ದು, ಅವರು ಉಳಿದುಕೊಳ್ಳುವ ವಿಳಾಸದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಬೇಕು. ಇಬ್ಬರ ಫೋನ್ ಲೋಕೇಷನ್ ನಿತ್ಯವೂ ಆನ್ ಇರಬೇಕು, ವಾರಕ್ಕೊಮ್ಮೆ ತನಿಖಾಧಿಕಾರಿಗೆ ವರದಿ ನೀಡಬೇಕೆಂಬ ಷರತ್ತುಗಳನ್ನು ನ್ಯಾಯಾಧೀಶರು ವಿಧಿಸಿದ್ದಾರೆ.

ಭೀಮಾ ಕೋರೆಗಾಂವ್ – ಎಲ್ಗರ್ ಪರಿಷದ್ ಆರೋಪಿಗಳಾದ ವರ್ನಾನ್ ಗೊನ್ಸಾಲ್ವಸ್ ಮತ್ತು ಅರುಣ್ ಫೆರೇರಾ ಅವರು ಆಗಸ್ಟ್ 2018 ರಿಂದ ಐದು ವರ್ಷ ಸೆರೆವಾಸವನ್ನು ಅನುಭವಿಸಿದ್ದಾರೆ. ಇದನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಇಬ್ಬರ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ ದಾಖಲಾಗಿದೆ.

ಇಬ್ಬರ ಜಾಮೀನನ್ನು ಈ ಹಿಂದೆ ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮಾವೋವಾದಿಗಳು ಹಣಕಾಸಿನ ಬೆಂಬಲ ನೀಡಿದ್ದಾರೆ ಎಂದು ಪುಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಅಲ್ಲದೆ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಾಕಾರಿ ಭಾಷಣಗಳು ಮರುದಿನ ಪುಣೆಯ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...