ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ | ಶರದ್ ಪವಾರ್ ಘೋಷಣೆ

Date:

  • ಎನ್‌ಸಿಪಿ 25ನೇ ವಾರ್ಷಿಕೋತ್ಸವದಲ್ಲಿ ಶರದ್‌ ಪವಾರ್‌ ಘೋಷಣೆ
  • ನಂದ ಶಾಸ್ತ್ರಿ ಅವರನ್ನು ದೆಹಲಿ ಎನ್‌ಸಿಪಿ ಮುಖ್ಯಸ್ಥರಾಗಿ ನೇಮಕ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್ ಅವರನ್ನು ನೇಮಿಸಿ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಅಧಿಕೃತವಾಗಿ ಶನಿವಾರ (ಜೂನ್‌ 10) ಘೋಷಿಸಿದ್ದಾರೆ ಎಂದು ವರದಿಯಾಗಿದೆ.

1999ರಲ್ಲಿ ಪವಾರ್ ಮತ್ತು ಪಿ.ಎ.ಸಂಗ್ಮಾ ಸೇರಿ ಸ್ಥಾಪಿಸಿದ ಎನ್‌ಸಿಪಿಗೆ ಶನಿವಾರ 25 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪವಾರ್ ಈ ಘೋಷಣೆ ಮಾಡಿದ್ದಾರೆ.

ಶರದ್‌ ಪವಾರ್‌ ಅವರು ಎನ್‌ಸಿಪಿಯ ಪ್ರಮುಖ ನಾಯಕ ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ಈ ಘೋಷಣೆ ಮಾಡಿದ್ದಾರೆ.

ಬಾರಾಮತಿ ಲೋಕಸಭಾ ಕ್ಷೇತ್ರದ ಸಂಸದೆ ಸುಪ್ರಿಯಾ ಸುಳೆ ಅವರಿಗೆ ಮಹಾರಾಷ್ಟ್ರ, ಹರಿಯಾಣ, ಪಂಜಾಬ್‌ನ ಮಹಿಳಾ ಯುವಜನತೆ ಮತ್ತು ಲೋಕಸಭೆ ಸಮನ್ವಯದ ಜವಾಬ್ದಾರಿಯನ್ನು ನೀಡಲಾಗಿದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗೋವಾ ಉಸ್ತುವಾರಿಯನ್ನು ಪ್ರಫುಲ್ ಪಟೇಲ್ ಅವರು ವಹಿಸಿಕೊಳ್ಳಲಿದ್ದಾರೆ.

ಎನ್‌ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ತಟ್ಕರೆ ಅವರಿಗೆ ಒಡಿಶಾ, ಪಶ್ಚಿಮ ಬಂಗಾಳ, ರೈತರು ಮತ್ತು ಅಲ್ಪಸಂಖ್ಯಾತರ ವಿಭಾಗದ ಜವಾಬ್ದಾರಿಯನ್ನು ನೀಡಲಾಗಿದೆ.

ನಂದ ಶಾಸ್ತ್ರಿ ಅವರು ದೆಹಲಿ ಎನ್ಸಿಪಿ ಮುಖ್ಯಸ್ಥರಾಗಿರುತ್ತಾರೆ ಎಂದು ಪವಾರ್ ಘೋಷಿಸಿದರು.

ಪವಾರ್ ಅವರು ಕಳೆದ ತಿಂಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಇದಕ್ಕೆ ಪಕ್ಷದ ಸದಸ್ಯರು ಮತ್ತು ಇತರ ರಾಜಕೀಯ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಸುದ್ದಿ ಓದಿದ್ದೀರಾ? ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಶರದ್ ಪವಾರ್ ಅವರ ಪ್ರಸ್ತಾಪವನ್ನು ಚರ್ಚಿಸಲು ರಚಿಸಲಾದ ಎನ್ಸಿಪಿ ಸಮಿತಿಯು ಮೇ 5 ರಂದು ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸಿತ್ತು.

ಶರದ್ ಪವಾರ್ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದರು. “ನಿಮ್ಮ ಭಾವನೆಗಳನ್ನು ನಾನು ಅಗೌರವಿಸಲು ಸಾಧ್ಯವಿಲ್ಲ. ನಿಮ್ಮ ಪ್ರೀತಿಯಿಂದಾಗಿ, ನನ್ನ ರಾಜೀನಾಮೆಯನ್ನು ಹಿಂಪಡೆಯಲು ನನಗೆ ಮಾಡಿದ ಬೇಡಿಕೆ ಮತ್ತು ಎನ್‌ಸಿಪಿಯ ಹಿರಿಯ ನಾಯಕರು ಅಂಗೀಕರಿಸಿದ ನಿರ್ಣಯವನ್ನು ನಾನು ಗೌರವಿಸುತ್ತೇನೆ. ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ಹಿಂಪಡೆಯುತ್ತೇನೆ” ಎಂದು ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...