ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕ್ರಮ ತಿಳಿಸಿ: ಕೇಂದ್ರಕ್ಕೆ ಮಾಹಿತಿ ಕೇಳಿದ ‘ಸುಪ್ರೀಂ’

Date:

  • ಬಾಲ್ಯ ವಿವಾಹ ನಿಷೇಧಾಜ್ಞೆ ಗಮನಿಸುವ ಹೆಚ್ಚುವರಿ ಹೊಣೆಗಾರಿಕೆ
  • ಮು.ನ್ಯಾ. ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠದಿಂದ ಅರ್ಜಿ ವಿಚಾರಣೆ

ದೇಶದಲ್ಲಿ ಬಾಲ್ಯ ವಿವಾಹ ನಿಷೇಧಾಜ್ಞೆ ಜಾರಿಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ (ಏಪ್ರಿಲ್ 13) ಕೇಂದ್ರ ಸರ್ಕಾರವನ್ನು ಕೇಳಿದೆ.

ಸೊಸೈಟಿ ಫಾರ್‌ ಎನ್‌ಲೈಟ್‌ಮೆಂಟ್‌ ಮತ್ತು ವಾಲಂಟರಿ ಆಕ್ಷನ್‌ ಸಂಸ್ಥೆಗಳು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

2006ರ ಬಾಲ್ಯ ವಿವಾಹಗಳ ನಿಷೇಧಾಜ್ಞೆ ಕಾಯ್ದೆಯಡಿ ನಿಷೇಧ ಜಾರಿಗೊಳಿಸಲು ಯಾವುದೇ ಅಧಿಕಾರಿಗಳು ನೇಮಕವಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು. ಬಾಲ್ಯ ವಿವಾಹ ಈಗಲೂ ಚಾಲ್ತಿಯಲ್ಲಿದೆ ಎಂದು ಹೇಳಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಎಲ್ಲ ರಾಜ್ಯಗಳ ಬಳಿ ಬಾಲ್ಯ ವಿವಾಹಗಳ ‘ಲಕ್ಷಣ ಹಾಗೂ ವ್ಯಾಪ್ತಿ’ಯ ಸಂಗ್ರಹ ದತ್ತಾಂಶಗಳ ನವೀಕರಿಸಿದ ಸ್ಥಿತಿಗತಿಯ ವರದಿ ಸಲ್ಲಿಸುವಂತೆ ಪೀಠ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ನಿರ್ದೇಶಿಸಿದೆ.

2006ರ ಬಾಲ್ಯ ವಿವಾಹಗಳ ನಿಷೇಧ, ರೂಪಿಸಿದ ನೀತಿಗಳ ಅನುಷ್ಠಾನಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಪೀಠ ಕೇಂದ್ರಕ್ಕೆ ಸೂಚಿಸಿದೆ.

ಎಲ್ಲ ಸಮುದಾಯಗಳ ಮಹಿಳೆಯರ ವಿವಾಹದ ವಯಸ್ಸನ್ನು 21ಕ್ಕೆ ಏರಿಸುವ ಮಸೂದೆಯೊಂದನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಇದೇ ವಿಷಯ ಸ್ಥಾಯಿ ಸಮಿತಿಯ ಮುಂದೆ ಬಾಕಿ ಇದೆ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಾಧವಿ ದಿವಾನ್‌ ಪೀಠಕ್ಕೆ ಅರುಹಿದರು.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ | ಬುಡಕಟ್ಟು ಮಹಿಳೆಯರ ಮೇಲೆ ದೌರ್ಜನ್ಯ; ಟಿಎಂಸಿ ನಾಯಕ ಸೇರಿ ಇಬ್ಬರ ಬಂಧನ

2006ರ ಕಾಯ್ದೆಯಡಿ ರಾಜ್ಯಗಳ ಮಟ್ಟದಲ್ಲಿ ಅಧಿಕಾರಿಗಳಿರುತ್ತಾರೆ. ರಾಜ್ಯ ಸರ್ಕಾರಗಳೇ ಬಾಲ್ಯ ವಿವಾಹ ನಿಷೇಧಾಜ್ಞೆ ಜಾರಿ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ದಿವಾನ್‌ ಉಲ್ಲೇಖಿಸಿದರು.

ಕೆಲವು ರಾಜ್ಯ ಸರ್ಕಾರಗಳು ನಿಷೇಧಾಜ್ಞೆ ಜಾರಿ ಅಧಿಕಾರಿಗಳನ್ನು ನೇಮಿಸಿವೆ. ಜಿಲ್ಲೆಗಳಲ್ಲಿರುವ ವಲಯ ಅಭಿವೃದ್ಧಿ ಅಧಿಕಾರಿಗಳಿಗೆ ನಿಷೇಧಾಜ್ಞೆ ನೋಡಿಕೊಳ್ಳುವ ಹೆಚ್ಚುವರಿ ಕೆಲಸವನ್ನು ನೀಡಲಾಗಿದೆ ಎಂದು ಅರ್ಜಿ ಹೇಳಿದೆ.

ಮುಂದಿನ ವಿಚಾರಣೆಯನ್ನು ಜುಲೈಗೆ ಮುಂದೂಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...