ಮಣಿಪುರ ಹಿಂಸಾಚಾರ | ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್‌ ಸೂಚನೆ

Date:

  • ಕುಕಿ ಹಾಗೂ ಮೇತೀ ಸಮುದಾಯಗಳ ನಡುವಿನ ಘರ್ಷಣೆಯಿಂದ ರಾಜ್ಯದಲ್ಲಿ ಹಿಂಸಾಚಾರ
  • ರಾಜ್ಯದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ

ಮಣಿಪುರ ಹಿಂಸಾಚಾರ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 3) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದ್ದು ವರದಿಯಾಗಿರುವ ಹಿಂಸಾಚಾರ ಘಟನೆಗಳು, ನಿರಾಶ್ರಿತರ ಪುನರ್ವಸತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೈಗೊಂಡ ಕ್ರಮಗಳ ಬಗ್ಗೆ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಮಣಿಪುರ ಸರ್ಕಾರಕ್ಕೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಮಣಿಪುರ ಹಿಂಸಾಚಾರ ಸಂಬಂಧ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿತು. ಮಣಿಪುರದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುವಂತೆ ಪೀಠ ರಾಜ್ಯ ಸರ್ಕಾರಕ್ಕೆ ಕೇಳಿತು. ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದೆ.

ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಉತ್ತರಿಸಿ. ರಾಜ್ಯ ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಿದೆ. ಪರಿಸ್ಥಿತಿ ಹಂತ ಹಂತವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಭದ್ರತೆಗೆ ಸಿವಿಲ್ ಪೊಲೀಸರ ಹೊರತಾಗಿ ಮಣಿಪುರ ರೈಫಲ್‌ಗಳು, ಸಿಎಪಿಎಫ್‌ನ ಕಂಪನಿಗಳು, ಸೇನೆಯ 114 ಗುಂಡುಗಳು ಮತ್ತು ಮಣಿಪುರ ಕಮಾಂಡೊಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಂಡಾಯ ನನಗೆ ಹೊಸದಲ್ಲ, ಮತ್ತೆ ಪಕ್ಷ ಸಂಘಟಿಸುತ್ತೇನೆ; ಅಜಿತ್‌ ನಡೆಗೆ ಶರದ್‌ ಪವಾರ್ ಪ್ರತಿಕ್ರಿಯೆ

ಅಲ್ಪಸಂಖ್ಯಾತ ಕುಕಿ ಬುಡಕಟ್ಟು ಜನಾಂಗದವರಿಗೆ ಸೇನೆಯ ರಕ್ಷಣೆ ಮತ್ತು ಅವರ ಮೇಲೆ ದಾಳಿ ನಡೆಸುತ್ತಿರುವ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್‌ಜಿಒ ಸಲ್ಲಿಸಿದ್ದ ಮನವಿ ಸೇರಿದಂತೆ ಮಣಿಪುರ ಹಿಂಸಾಚಾರ ಕುರಿತ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಸಂಬಂಧ ಮಣಿಪುರದಲ್ಲಿ ಮೇ 3ರಂದು ಪ್ರಾರಂಭವಾದ ಮೇತೀ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 120 ಜನರು ಮೃತಪಟ್ಟಿದ್ದು 3 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹಿಂಸಾಚಾರ ತಡೆಗೆ ರಾಜ್ಯದ ಅನೇಕ ಕಡೆ ಸೇನೆ ನಿಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...