ತನ್ನ ವಿರುದ್ಧ ಮತ ಚಲಾಯಿಸಿದಕ್ಕೆ ಇಬ್ಬರ ಕೊಲೆ; ಆರ್‌ಜೆಡಿ ಮಾಜಿ ಸಂಸದನಿಗೆ ಸುಪ್ರೀಂನಿಂದ ಜೀವಾವಧಿ ಶಿಕ್ಷೆ

Date:

ತನ್ನ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 1995ರಲ್ಲಿ ಇಬ್ಬರನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಆರ್‌ಜೆಡಿ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಶುಕ್ರವಾರ(ಸೆ.01) ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ಈ ಪ್ರಕರಣವು ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಅಸಾಧಾರಣ ದುಃಖದ ಘಟನೆಯಾಗಿದೆ ಎಂದು ಹೇಳಿದ ನ್ಯಾಯಾಧೀಶರು ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವುದನ್ನು ರದ್ದುಗೊಳಿಸುವ ಮೂಲಕ ಮಾಜಿ ಸಂಸದರನ್ನು ಆಗಸ್ಟ್ 18 ರಂದು ದೋಷಿ ಎಂದು ತೀರ್ಪು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಈ ಪ್ರಕರಣವನ್ನು ಶಿಕ್ಷೆಯ ಹಂತದಲ್ಲಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠ, “ಈ ರೀತಿಯ ಪ್ರಕರಣವನ್ನು ನಾವು ಹಿಂದೆಂದೂ ನೋಡಿಲ್ಲ” ಎಂದು ಹೇಳಿದೆ.

ಸಿಂಗ್ ಪರವಾಗಿ ಹಿರಿಯ ವಕೀಲರಾದ ಎಎಂ ಸಿಂಘ್ವಿ ಮತ್ತು ಆರ್ ಬಸಂತ್ ಮತ್ತು ಸಂತ್ರಸ್ತ ಹರೇಂದ್ರ ರೈ ಪರ ವಕೀಲರನ್ನು ಆಲಿಸಿದ ಪೀಠವು, “ಜೀವಾವಧಿ ಅಥವಾ ಮರಣದಂಡನೆ ಎರಡು ಆಯ್ಕೆಗಳಿವೆ” ಎಂದು ಹೇಳಿತು.

ಈ ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಜೀವಾವಧಿ ಶಿಕ್ಷೆ ವಿಧಿಸಲು ನಿರ್ಧರಿಸಿದ ನ್ಯಾಯಾಲಯವು ಮೃತರಾದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಮತ್ತು ಗಾಯಗೊಂಡ ಸಾಕ್ಷಿಗೆ 5 ಲಕ್ಷ ರೂ.ನೀಡಬೇಕೆಂದು ಆರೋಪಿಗೆ ತಿಳಿಸಿತು.

ಡಿಸೆಂಬರ್ 2008 ರಲ್ಲಿ ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಪ್ರಭುನಾಥ್ ಸಿಂಗ್ ಅವರನ್ನು ಖುಲಾಸೆಗೊಳಿಸಿತು. ಪಾಟ್ನಾ ಹೈಕೋರ್ಟ್ ಕೂಡ 2012 ರಲ್ಲಿ ಖುಲಾಸೆಯನ್ನು ಎತ್ತಿಹಿಡಿದಿತ್ತು ಖುಲಾಸೆಗೊಳಿಸಿರುವುದನ್ನು ಮೃತ ರಾಜೇಂದ್ರ ರೈ ಅವರ ಸಹೋದರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದರು.

1995, ಮಾರ್ಚ್‌ನಲ್ಲಿ ಬಿಹಾರದ ಸರನ್ ಜಿಲ್ಲೆಯ ಚಪ್ರಾ ಮತಗಟ್ಟೆಯ ಬಳಿ ತನಗೆ ವಿರುದ್ಧವಾಗಿ ಮತ ಚಲಾಯಿಸಿದ ಕಾರಣ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರ ಸಲಹೆಯಂತೆ ಇಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...