ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

Advertisements
  • ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ
  • ಪರಮಾಧಿಕಾರ ಬಳಸಿ ವಿಚ್ಚೇದನ ಊರ್ಜಿತ

ಹಿಂದೂ ವಿವಾಹ ಕಾಯ್ದೆಯಡಿಯ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ʻದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು  ಕಾಯದೇ ವಿಚ್ಛೇದನ ಪಡೆಯಬಹುದು. ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ಇಲ್ಲದೆಯೇ ಸುಪ್ರೀಂ ಕೋರ್ಟ್​ ತನ್ನ ಪರಮಾಧಿಕಾರ ಬಳಸಿ ವಿಚ್ಛೇದನವನ್ನು ಊರ್ಜಿತಗೊಳಿಸಬಹುದುʼ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಹಾಗೂ ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ?: ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ; ಕನ್ನಡಿಗ ಸೇರಿದಂತೆ ಮೂವರ ಬಂಧನ

ʻದಂಪತಿ ನಡುವಿನ ವೈವಾಹಿಕ ಜೀವನವನ್ನು ಮತ್ತೆ ಸರಿಪಡಿಸಲಾಗದ ಸನ್ನಿವೇಶವಿದ್ದರೆʼ ಸುಪ್ರೀಂ ಕೋರ್ಟ್​ ಆ ಜೋಡಿಗೆ ವಿಚ್ಛೇದನ ನೀಡಬಹುದು. ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ನೀಡಲಾದ ವಿಶೇಷಾಧಿಕಾರದ ಮೂಲಕ ವಿವಾಹವನ್ನು ಅನೂರ್ಜಿತಗೊಳಿಸುವ ಅವಕಾಶ ಸುಪ್ರೀಂ ಕೋರ್ಟ್‌ಗೆ ಇದೆʼ ಎಂದು ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಕೋರಿದ ದಂಪತಿಗೆ 6 ತಿಂಗಳ ಒಳಗೇ ಕೆಲವು ಷರತ್ತುಗಳಿಗೆ ಒಳಪಟ್ಟು ವಿಚ್ಛೇದನ ನೀಡಬಹುದು ಎಂದು ಐವರು ಸದಸ್ಯರ ಸಾಂವಿಧಾನಿಕ ಪೀಠ ಹೇಳಿದೆ.

ವಿಚ್ಛೇದನದ ಬಳಿಕ ಜೀವನ ನಿರ್ವಹಣೆ, ಜೀವನಾಂಶ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಹೇಗೆ ಸಮತೋಲನ ಸಾಧಿಸಬೇಕು ಎಂಬುದನ್ನೂ ಪೀಠವು ಆದೇಶದಲ್ಲಿ ವಿವರಿಸಿದೆ.

2014ರಲ್ಲಿ ಶಿಲ್ಪಾ ಸೈಲೇಶ್ ಸಲ್ಲಿಸಿದ್ದ ಪ್ರಮುಖ ಅರ್ಜಿ ಸೇರಿ ಐದು ಅರ್ಜಿಗಳ ಹೆಚ್ಚಿನ ವಿಚಾರಣೆಗಾಗಿ ಪ್ರಕರಣವನ್ನು 2016 ರ ಜೂನ್ 29 ರಂದು ಐವರು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು. 2022ರ ಸೆಪ್ಟೆಂಬರ್ 29ರಂದು ಸುಪ್ರೀಂನ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಸೋಮವಾರ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಕಡ್ಡಾಯವಾಗಿ 6 ತಿಂಗಳು ಕಾಯುವ ಅವಶ್ಯಕತೆಯಿಲ್ಲ ಎಂದು ಹೇಳಿದೆ.

ವಿಚ್ಛೇದನ ಪ್ರಕ್ರಿಯೆ ಹೇಗಿದೆ?: ಹಿಂದೂ ವಿವಾಹ ಕಾಯಿದೆ 1955 ರ ಸೆಕ್ಷನ್ 13 ಬಿ ಪ್ರಕಾರ ದಂಪತಿ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ವಿಚ್ಛೇದನದ ಪ್ರಕರಣಗಳಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಸೂಚಿಸಿ, ಅರ್ಜಿ ಸಲ್ಲಿಸಿದ ಬಳಿಕ 6 ತಿಂಗಳು ಕಾಯುವ ಅವಧಿ ಕಾನೂನಿನಲ್ಲಿ ಕಡ್ಡಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X