ಕೇರಳ | ಬೋಟ್‌ ದುರಂತ; 18 ಮಂದಿ ಸಾವು

Date:

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರಿನಲ್ಲಿ ಭಾನುವಾರ ಸಂಭವಿಸಿದ ಬೋಟ್‌ ದುರಂತದಲ್ಲಿ 6 ಮಕ್ಕಳು ಮತ್ತು 3 ಮಹಿಳೆಯರು ಸೇರಿದಂತೆ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ. 20 ಜನರನ್ನು ಈಗಾಗಲೇ ರಕ್ಷಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ತಾನೂರಿನ ಒಟ್ಟುಂಪುರಂನ ತೂವಲ್ ಥೀರಂ ಎಂಬಲ್ಲಿ ಭಾನುವಾರ ಸಂಜೆ 6.30ರ ಸಮಯದಲ್ಲಿ  ಈ ದುರಂತ ಸಂಭವಿಸಿದೆ.

ನದಿಯಲ್ಲಿ ಮುಳುಗಿದ ಎರಡು ಅಂತಸ್ತಿನ ಬೋಟ್‌ನಲ್ಲಿ  40 ರಿಂದ 50 ಮಂದಿ ಪ್ರವಾಸಿಗರಿದ್ದರು ಎನ್ನಲಾಗಿದೆ. ಬೋಟ್‌ನಿಂದ ಜಿಗಿದು ಕೆಲವರು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದುರಂತಕ್ಕೀಡಾದ ಬೋಟ್‌ಗೆ ಎರಡು ಬಾಗಿಲುಗಳಿದ್ದರೂ ಸಹ, ಸಣ್ಣ ಮಕ್ಕಳು ಸೇರಿದಂತೆ ಹಲವು ಕುಟುಂಬಗಳು ಹೊರಬರಲಾಗದೆ ಕೆಳಗಿನ ಅಂತಸ್ತಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಈಜಿ ದಡ ಸೇರಿದ ಶಫೀಕ್ ಎಂಬುವವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...