ಕೇರಳ | ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ, ಪಥಸಂಚಲನ ನಿಷೇಧ

Date:

  • 2016ರಲ್ಲಿಯೂ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸಿದ್ದ ಟಿಡಿಬಿ
  • ಸಂಘ ದೇವಸ್ಥಾನಗಳನ್ನು ಶಸ್ತ್ರಾಸ್ತ್ರ ಉಗ್ರಾಣಗಳಾಗಿಸುತ್ತಿದೆ ಎಂದು ಕಡಕಂಪಲ್ಲಿ ಆರೋಪ

ಕೇರಳ ರಾಜ್ಯದಲ್ಲಿ ತನ್ನ ಆಡಳಿತಕ್ಕೆ ಒಳಪಡುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆ ನಿಷೇಧಿಸುವಂತೆ ತಿರುವಾಂಕೂರು ದೇವಸ್ಥಾನ ಮಂಡಳಿ (ಟಿಡಿಬಿ) ಅಧಿಕಾರಿಗಳಿಗೆ ಭಾನುವಾರ (ಮೇ 20) ಹೇಳಿದೆ.

ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ತನ್ನ ಯಾವುದೇ ಚಟುವಟಿಕೆ ಅಥವಾ ತರಬೇತಿಗಳನ್ನು ನಡೆಸಲು ಅನುಮತಿಸಬಾರದರು ಎಂದು ಈ ಹಿಂದೆ ಆದೇಶ ಹೊರಡಿಸಲಾಗಿದೆ. ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಟಿಡಿಬಿ ಹೊಸ ಸುತ್ತೋಲೆ ಹೊರಡಿಸಿದೆ.

“ಸಂಘವು ತನ್ನ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲು ದೇವಸ್ಥಾನದ ಜಾಗ ಬಳಸಿಕೊಳ್ಳುವುದರ ಮೇಲೆ ನಿರ್ಬಂಧ ಹೇರುವಂತೆ 2021ರಲ್ಲಿ ಆದೇಶಿಸಲಾಗಿದೆ. ಆದರೆ, ಅದು ಕಟ್ಟುನಿಟ್ಟಾಗಿ ಜಾರಿ ಬಂದಿಲ್ಲ. ಆದ್ದರಿಂದ ಆದೇಶ ಪಾಲನೆಯತ್ತ ಗಮನಹರಿಸಬೇಕು” ಎಂದು ಸುತ್ತೋಲೆ ತಿಳಿಸಿದೆ.

ಆದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

ದೇವಸ್ಥಾನದ ಆವರಣದಲ್ಲಿ ಆರ್‌ಎಸ್‌ಎಸ್‌ ನಡೆಸುವ ಶಸ್ತ್ರಾಸ್ತ್ರ ತರಬೇತಿ, ಇತರ ಚಟುವಟಿಕೆಗಳನ್ನು ನಿರ್ಬಂಧಿಸಿ ಟಿಡಿಬಿ 2016ರಲ್ಲಿಯೂ ಸುತ್ತೋಲೆ ಹೊರಡಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಥಾಣೆ ಹತ್ಯೆ ಪ್ರಕರಣ | ಎಚ್‌ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!

ದೆಹಲಿಯ ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ರೀತಿಯಲ್ಲಿಯೇ ಮಹಾರಾಷ್ಟ್ರದ ಥಾಣೆಯಲ್ಲಿ ಮಹಿಳೆಯೊಬ್ಬರನ್ನು...

ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌ | ವಿಚಾರಣೆಗೆ ಹಾಜರಾಗುವುದಿಲ್ಲ ಎಂದ ಟಿಎಂಸಿ ನಾಯಕ

ಪ್ರಾಥಮಿಕ ಶಾಲಾ ನೇಮಕಾತಿ ಹಗರಣದಲ್ಲಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿದ್ದ ಸಿಬಿಐ ಪಂಚಾಯತ್‌ ಚುನಾವಣೆಯ...

ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರ ರಾಜ್ಯದಲ್ಲಿ ಪದೇ ಪದೇ ಇಂಟರ್ನೆಟ್ ಸ್ಥಗಿತಗೊಳಿಸುವುದರ...

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪ: ಐಎಂಡಿ

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ...