ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

Date:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ₹2 ಸಾವಿರ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಜ್ರಿವಾಲ್, “2000 ರೂ. ನೋಟು ತರುವುದರಿಂದ ಭ್ರಷ್ಟಾಚಾರ ನಿಲ್ಲುತ್ತದೆ ಎಂದು ಮೊದಲು ಹೇಳಿದ್ದರು. ಈಗ 2000 ನೋಟು ನಿಷೇಧಿಸಿರುವುದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎನ್ನುತ್ತಿದ್ದಾರೆ. ಅದಕ್ಕಾಗಿಯೇ ನಾವು ಹೇಳುತ್ತೇವೆ, ಪ್ರಧಾನಿ ವಿದ್ಯಾವಂತರಾಗಿರಬೇಕು. ಅನಕ್ಷರಸ್ಥ ಪ್ರಧಾನಿಗೆ ಯಾರು ಬೇಕಾದರೂ ಏನು ಬೇಕಾದರೂ ಹೇಳಬಹುದು. ಅವರಿಗೆ ಅದು ಅರ್ಥವಾಗುವುದಿಲ್ಲ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಗಿದೆ” ಎಂದು ಬರೆದುಕೊಂಡಿದ್ದಾರೆ.

2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವ ನಿರ್ಧಾರ ಮಾಡಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ಸದ್ಯ ಚಲಾವಣೆಯಲ್ಲಿರುವ ನೋಟುಗಳನ್ನು ಸೆಪ್ಟೆಂಬರ್ 30ರೊಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿ ಕೊಳ್ಳುವಂತೆ ಸೂಚನೆ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

2 ಸಾವಿರ ಮುಖಬೆಲೆಯ ನೋಟುಗಳನ್ನು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಒಂದು ಬಾರಿಗೆ 20 ಸಾವಿರದವರೆಗೆ ಮಾತ್ರವೇ ಬದಲಾಯಿಸಿಕೊಳ್ಳಬಹುದು ಎನ್ನುವ ಮಿತಿಯನ್ನು ಆರ್‌ಬಿಐ ವಿಧಿಸಿದೆ. ಬ್ಯಾಂಕ್ ಶಾಖೆಗಳ ದೈನಂದಿನ ಕೆಲಸಗಳಿಗೆ ಅಡಚಣೆ ಆಗಬಾರದು ಎಂಬ ಕಾರಣಕ್ಕೆ ಈ ಮಿತಿಯನ್ನು ಹೇರಲಾಗಿದೆ.

2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ದೊಡ್ಡ ನೋಟುಗಳನ್ನು ರದ್ದುಗೊಳಿಸಿ ಸಂಚಲನ ಮೂಡಿಸಿದ್ದರು. ಭ್ರಷ್ಟಾಚಾರ ಮತ್ತು ಕಪ್ಪುಹಣ ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ಬ್ಯಾನ್ ಮಾಡಿ 2000 ನೋಟು ಪರಿಚಯಿಸಿತ್ತು. 1000 ರೂಪಾಯಿ ನೋಟುಗಳಿಂದ ಕಪ್ಪುಹಣ ಹೆಚ್ಚುತ್ತದೆ ಎಂದು ಹೇಳಿದಾಗ 2000 ನೋಟು ಚಲಾವಣೆಗೆ ಟೀಕೆ ವ್ಯಕ್ತವಾಗಿತ್ತು. ಮತ್ತೊಂದೆಡೆ 500 ರೂಪಾಯಿಯ ಹಳೆಯ ನೋಟು ರದ್ದು ಮಾಡಿ ಹೊಸ 500 ರೂಪಾಯಿ ನೋಟು ಚಲಾವಣೆಗೆ ಬಂದಿತ್ತು.

ಆಗಿನ ಸಮಯದಲ್ಲಿ ದೇಶದ ಜನತೆ ಕರೆನ್ಸಿ ವಿನಿಮಯಕ್ಕೆ ಬ್ಯಾಂಕ್‌ಗಳ ಮೊರೆ ಹೋಗಿದ್ದನ್ನು ಯಾರೂ ಮರೆಯುವಂತಿಲ್ಲ. ಇದೀಗ ಮತ್ತೊಮ್ಮೆ ಅದೇ ರೀತಿ ಆರ್‌ಬಿಐ ಶಾಕ್ ನೀಡಿದ್ದಕ್ಕೆ ವಿಪಕ್ಷಗಳು ಕಿಡಿಕಾರಿವೆ. 2000 ರೂಪಾಯಿ ನೋಟು ರದ್ದತಿ ಘೋಷಣೆಗೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...