ದಿ ಕೇರಳ ಸ್ಟೋರಿ | ʼಕಾಲ್ಪನಿಕ ಕಥೆʼ ಎಂದು ಅಳವಡಿಸಲು ಸುಪ್ರೀಂಕೋರ್ಟ್‌ ಸೂಚನೆ

Date:

Advertisements
  • ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ
  • ʻಡಿಸ್‌ಕ್ಲೈಮರ್‌ನಲ್ಲಿ ಕಾಲ್ಪನಿಕ ಕಥೆ ಎಂದು ಸ್ಪಷ್ಟಪಡಿಸಿʼ

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ʻಕೇರಳದಲ್ಲಿ 32,000 ಮಹಿಳೆಯರನ್ನು ಮೋಸದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಐಸಿಸ್‌ಗೆ ನೇಮಕ ಮಾಡಲಾಗಿದೆʼ ಎಂದು ಹೇಳಿರುವುದನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಪ್ರದರ್ಶನದ ಮೇಲಿನ ನಿಷೇಧ ಮತ್ತು ತಮಿಳುನಾಡಿನಲ್ಲಿ ಪರೋಕ್ಷ ನಿಷೇಧದ ವಿರುದ್ಧ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ಡಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠವು ʼಈ ಸಿನಿಮಾದ  ಕಥೆಯು ಕಲ್ಪನೆಯ ಆವೃತ್ತಿಯನ್ನು ಪ್ರತಿನಿಧಿಸುತ್ತದೆ ಎಂಬುದನ್ನು ಡಿಸ್‌ಕ್ಲೈಮರ್‌ನಲ್ಲಿ ಸ್ಪಷ್ಟಪಡಿಸಿʼ ಎಂದು ಸೂಚನೆ ನೀಡಿದೆ.

Advertisements

ʻಮತಾಂತರ ಮಾಡಲಾದ ಮಹಿಳೆಯರ ಸಂಖ್ಯೆಯು 32 ಸಾವಿರ ಎಂದು ಹೇಳಲು ಯಾವುದೇ ಅಧಿಕೃತ ದಾಖಲೆಗಳು ಲಭ್ಯವಿಲ್ಲ ಅಥವಾ ಬೇರೆ ಯಾವುದೇ ನಿಖರ ಅಂಕಿ ಅಂಶಗಳಿಲ್ಲ ಎಂಬುದನ್ನು ಮೇ 20ರಂದು ಸಂಜೆ 5 ಗಂಟೆಯ ಒಳಗಾಗಿ ಚಿತ್ರದ ಡಿಸ್‌ಕ್ಲೈಮರ್‌ನಲ್ಲಿ ಸ್ಪಷ್ಟಪಡಿಸಿʼ ಎಂದು ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

ನಿಷೇಧಕ್ಕೆ ತಡೆ

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ಗುರುವಾರ ಸುಪ್ರೀಂಕೋರ್ಟ್ ತಡೆ ನೀಡಿದೆ. ʻಸಾರ್ವಜನಿಕರ ಅಸಹಿಷ್ಣುತೆಗೆ ಶಾಸನಬದ್ಧ ನಿಬಂಧನೆಗಳನ್ನು ಬಳಸಲಾಗದುʼಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ.

ʻಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆʼ ಎಂದು ನ್ಯಾಯಪೀಠ ಹೇಳಿದೆ. ʻಚಿತ್ರ ಪ್ರದರ್ಶನವಾಗುತ್ತಿರುವ ಚಿತ್ರಮಂದಿರಗಳಲ್ಲಿ ಸಾಕಷ್ಟು ಭದ್ರತೆ ಒದಗಿಸಬೇಕು ಮತ್ತು ಪ್ರೇಕ್ಷಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಬೇಕುʼ ಎಂದು ಪೀಠ ನಿರ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X