ಜಾರ್ಖಂಡ್ | ಧನ್‌ಬಾದ್‌ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು; ಹಲವರು ಸಿಲುಕಿರುವ ಶಂಕೆ

Date:

  • ಧನ್‌ಬಾದ್‌ ಬಳಿಯ ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಘಟನೆ
  • ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಕಲ್ಲಿದ್ದಲು ಗಣಿ ನಿರ್ವಹಣೆ

ಜಾರ್ಖಂಡ್‌ನ ಧನ್‌ಬಾದ್‌ ಬಳಿ ಶುಕ್ರವಾರ (ಜೂನ್ 9) ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (ಬಿಸಿಸಿಎಲ್) ಭೌರಾ ಕೊಲೈರಿ ಎಂಬ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಕಾನೂನುಬಾಹಿರವಾಗಿ ಇಲ್ಲಿ ಕಲ್ಲಿದ್ದಲು ಗಣಿ ನಡೆಯುತ್ತಿತ್ತು.

ಧನ್‌ಬಾದ್‌ ಗಣಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಅಭಿಷೇಕ್ ಕುಮಾರ್ ಹೇಳಿದ್ದಾರೆ.
ಕಲ್ಲಿದ್ದಲು ಗಣಿ ಒಳಹೊಕ್ಕಾಗ ಅನೇಕ ಸ್ಥಳೀಯ ಗ್ರಾಮಸ್ಥರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ಥಳೀಯರ ಸಹಾಯದಿಂದ ಮೂವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರತ್ಯೇಕ ಬಜೆಟ್‌ ಮಂಡನೆ ಪದ್ಧತಿ ಸ್ಥಗಿತಗೊಳಿಸಿ ಬಿಜೆಪಿ ರೈಲ್ವೆ ವ್ಯವಸ್ಥೆ ನಾಶಗೊಳಿಸಿದೆ: ಮಮತಾ ಬ್ಯಾನರ್ಜಿ ಟೀಕೆ

“ಬಿಸಿಸಿಎಲ್‌ನ ತೆರೆದ ಗಣಿ ಭಾಗ ಕುಸಿದಿದೆ. ಒಂದು ಮೃತದೇಹ ಪತ್ತೆಯಾಗಿದೆ. ಎಷ್ಟು ಜನ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ. ಬಿಸಿಸಿಎಲ್ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಧನಬಾದ್ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌ಎಸ್‌ಪಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಶೀಘ್ರ ಈ ಬಗ್ಗೆ ಮಾಹಿತಿ ನೀಡಲಾಗುವುದು. ರಕ್ಷಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ಭೌರಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿನೋದ್ ಓರಾನ್ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...