ಜಮ್ಮು ಮತ್ತು ಕಾಶ್ಮೀರ | ಉಗ್ರರ ಬಾಂಬ್ ದಾಳಿಗೆ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

Date:

  • ಸೇನಾ ಸಿಬ್ಬಂದಿ ಹುತಾತ್ಮರಾದ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತ
  • ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನೆ ಮೇಲೆ ಉಗ್ರರ ದಾಳಿ

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶುಕ್ರವಾರ (ಮೇ 5) ಬೆಳಿಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಜಮ್ಮು ಪ್ರದೇಶದ ಭಾಟಾ ಧುರಿಯನ್ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ ಆಗಮಿಸಲು ಹೊಂಚು ಹಾಕಿದ್ದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಡಿ ಅರಣ್ಯದ ದಟ್ಟವಾದ ಪೊದೆಗಳಲ್ಲಿ ಮತ್ತು ಕಲ್ಲಿನ ಭೂಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತಿತ್ತು. ಮೇ 3ರಂದು ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು.

ಬೆಳಿಗ್ಗೆ 7.30ರ ಸುಮಾರಿಗೆ ಶೋಧ ತಂಡ ಭಯೋತ್ಪಾದಕರ ಸಂಪರ್ಕ ಇರುವ ಸ್ಥಳ ಪತ್ತೆ ಮಾಡಿದ್ದಾರೆ. ಭಯೋತ್ಪಾದಕರು ಮತ್ತು ಸೇನೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಬಳಿಕ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ್ದಾರೆ.

ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಪರಿಸ್ಥಿತಿ ಕೈ ಮೀರಿದರೆ ‘ಕಂಡಲ್ಲಿ ಗುಂಡಿಕ್ಕಲುʼ ಆದೇಶ

ಪ್ರಜಮ್ಮು ಮತ್ತು ಕಾಶ್ಮೀರ ಭಾಗದ ಕಾರ್ಯಾಚರಣೆಯನ್ನು ಬಲಪಡಿಸಲು ಹೆಚ್ಚುವರಿ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಸಿಲುಕಿದೆ ಎಂದು ಸೇನೆ ಹೇಳಿದೆ.

ಗುಂಡಿನ ಚಕಮಕಿಯ ಕಾರಣದಿಂದ ಭಯೋತ್ಪಾದಕ ಗುಂಪಿನಲ್ಲೂ ಸಾವು ನೋವುಗಳು ಸಂಭವಿಸಿರುವ ಸಾಧ್ಯತೆಯಿದೆ. ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಆದರೂ ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಈ ಮಧ್ಯೆ, ರಜೌರಿ ಪ್ರದೇಶದಲ್ಲಿ ಮೊಬೈಲ್, ಅಂತರ್ಜಾಲ ಸೇವೆ ಸೌಲಭ್ಯಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ...

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ...