2022ನೇ ಸಾಲಿನ ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಮೊದಲ ನಾಲ್ಕು ರ‍್ಯಾಂಕ್ ಪಡೆದ ಮಹಿಳೆಯರು

Date:

ದೇಶದ ಪ್ರತಿಷ್ಠಿತ ಕೇಂದ್ರ ಲೋಕಸೇವಾ ಆಯೋಗದ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಒಟ್ಟು 933 ಮಂದಿ ಉತ್ತೀರ್ಣರಾಗಿದ್ದಾರೆ. ಮೊದಲ ನಾಲ್ಕು ರ‍್ಯಾಂಕ್‌ಗಳನ್ನು ಮಹಿಳೆಯರೆ ಪಡೆದಿರುವುದು ವಿಶೇಷವಾಗಿದೆ.

ಇಶಿತಾ ಕಿಶೋರ್ ಮೊದಲ ರ‍್ಯಾಂಕ್ ಪಡೆದಿದ್ದರೆ, ಗರಿಮಾ ಲೋಹಿಯಾ 2ನೇ ಶ್ರೇಣಿ, ಎನ್‌ ಉಮಾ ಹರತಿ ಮೂರನೇ ಹಾಗೂ ಸ್ಮೃತಿ ಮಿಶ್ರಾ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಈ ಬಾರಿ 20ಕ್ಕೂ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ಉತ್ತೀರ್ಣರಾದವರಲ್ಲಿ ಸಾಮಾನ್ಯ ವಿಭಾಗದಿಂದ 345, ಆರ್ಥಿಕ ದುರ್ಬಲ ವರ್ಗದಡಿ 99, ಒಬಿಸಿಯಿಂದ 263, ಪರಿಶಿಷ್ಟ ಜಾತಿಯಿಂದ 154, ಪರಿಶಿಷ್ಟ ಪಂಗಡದ 72 ಅಭ್ಯರ್ಥಿಗಳು ಒಳಗೊಂಡಿದ್ದಾರೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಐಎಎಸ್ 180, ಐಎಫ್ಎಸ್ 38, ಐಪಿಎಸ್ 200 ಸೇರಿದಂತೆ 1022 ಹುದ್ದೆಗಳು ಖಾಲಿಯಿವೆ ಎಂದು ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಜೂನ್ 5, 2022 ರಂದು ನಡೆಸಲಾಯಿತು ಮತ್ತು ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 22 ರಂದು ಬಿಡುಗಡೆ ಮಾಡಲಾಯಿತು. ನಂತರ, ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ರಿಂದ 25 ರವರೆಗೆ ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಡಿಸೆಂಬರ್ 6 ರಂದು ಘೋಷಿಸಲಾಯಿತು. ನಂತರ ಸಂದರ್ಶನಗಳು ಮೇ 18 ರಂದು ಮುಕ್ತಾಯಗೊಂಡಿದ್ದವು.

ಫಲಿತಾಂಶ ನೋಡಲು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ https://www.upsc.gov.in/FR-CSM-22-engl-230523.pdf

https://www.upsc.gov.in/FR-CSM-22-engl-230523.pdf

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...