‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ಸುಪ್ರೀಂ ನೋಟಿಸ್

Date:

Advertisements

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಶುಕ್ರವಾರ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ, ಪ್ರತಿವಾದಿಗಳ ವಾದವನ್ನು ಆಲಿಸದೆ ಚಿತ್ರಕ್ಕೆ ತಡೆ ನೀಡುವ ಯಾವುದೇ ಪ್ರಸ್ತಾಪ ನಿರಾಕರಿಸಿ, ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

“ಸಿನಿಮಾವನ್ನು ದೇಶಾದ್ಯಂತ ಪ್ರದರ್ಶಿಸಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರ ಏಕೆ ಸಿನಿಮಾ ನಿಷೇಧಿಸಿದೆ. ಚಿತ್ರ ಪ್ರದರ್ಶನಕ್ಕೆ ಏಕೆ ಅನುಮತಿ ನೀಡಿಲ್ಲ? ಇದೇ ರೀತಿಯ ವಿವಿಧ ಜನಸಮುದಾಯ ಹೊಂದಿರುವ ದೇಶದ ವಿವಿಧ ರಾಜ್ಯಗಳಲ್ಲಿ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಅದು ಒಳ್ಳೆಯದಾಗಿರಬಹುದು ಅಥವಾ ಕೆಟ್ಟದಾಗಿರಬಹುದು, ಸಿನಿಮಾ ನಿಷೇಧಕ್ಕೂ ಹಾಗೂ ಚಿತ್ರದ ಸಿನಿಮೀಯ ಮೌಲ್ಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ದಿ ಕೇರಳ ಸ್ಟೋರಿ’ ಸಿನಿಮಾ ಬಹಿಷ್ಕರಿಸಿ; ಸಿನಿಪ್ರೇಮಿಗಳಿಗೆ ಸಚಿವರ ಮನವಿ

ಕೇರಳದ 32,000 ಮಹಿಳೆಯರು ಐಸಿಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳುವ ಚಲನಚಿತ್ರವು ವಿಪಕ್ಷಗಳ ರಾಜ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಿದರೆ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿಗಳನ್ನು ಪಡೆದುಕೊಂಡಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ವಿಪುಲ್ ಶಾ ನಿರ್ಮಿಸಿದ್ದಾರೆ.

32,000 ಮಹಿಳೆಯರು ಐಸಿಸ್‌ಗೆ ಸೇರುತ್ತಿರುವುದು ಸುಳ್ಳಿನಿಂದ ಕೂಡಿದ ದುರುದ್ದೇಶದ ಚಿತ್ರ ಎಂದು ವಿಪಕ್ಷಗಳು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X