ಸಿಬಿಐ ವಿಚಾರಣೆ ಗೌರವಿಸುತ್ತೇನೆ ಎಂದ ಅರವಿಂದ್‌ ಕೇಜ್ರಿವಾಲ್

Date:

  • ಪ್ರಧಾನಿ ಮೋದಿ ಭ್ರಷ್ಟಾಚಾರದ ಅಪರಾವತಾರ ಅರವಿಂದ್‌ ಕೇಜ್ರಿವಾಲ್‌
  • ಕೇಜ್ರಿವಾಲ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬೆಂಬಲ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನೀಡಿರುವ ಸಮನ್ಸ್‌ಗೆ ಗೌರವ ನೀಡುತ್ತೇನೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಶನಿವಾರ (ಏಪ್ರಿಲ್‌ 15) ಹೇಳಿದ್ದಾರೆ.

ಪ್ರಕರಣದಲ್ಲಿ ವಿಚಾರಣೆ ನಡೆಸಲು ಸಿಬಿಐ ಹಿಂದಿನ ದಿನ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದರು.

ಈ ಕುರಿತು ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಜೊತೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌, ಎಎಪಿಯ ಸಂಸತ್‌ ಸದಸ್ಯರು ಮತ್ತು ದೆಹಲಿ ಸರ್ಕಾರದ ಇತರ ನಾಯಕರು ಹಾಜರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಅಪರಾವತಾರ. ಆದರೆ ಭ್ರಷ್ಟಾಚಾರದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕರನ್ನು ಗುರಿಯಾಗಿಸಲಾಗುತ್ತಿದೆ” ಎಂದು ಕಿಡಿಕಾರಿದರು.

“ಕೇಜ್ರಿವಾಲ್‌ ಭ್ರಷ್ಟನಾದರೆ ಈ ಜಗತ್ತಿನಲ್ಲಿ ಯಾರೂ ಸಭ್ಯರಲ್ಲ ಎಂದು ಪ್ರಧಾನಿ ಮೋದಿಗೆ ಹೇಳುತ್ತೇನೆ. ಸಿಬಿಐ ನನ್ನನ್ನು ನಾಳೆ ವಿಚಾರಣೆಗೆ ಕರೆದಿದೆ, ಹೋಗುತ್ತೇನೆ. ನಾನು ಕಳ್ಳನಾದರೆ ಈ ಜಗತ್ತಿನಲ್ಲಿ ಯಾರೂ ಪ್ರಾಮಾಣಿಕರಲ್ಲ ಎಂದು ಪುನರುಚ್ಛರಿಸುತ್ತೇನೆ” ಎಂದು ಕೇಜ್ರಿವಾಲ್‌ ಸುದ್ದಿಗಾರರಿಗೆ ತಿಳಿಸಿದರು.

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬೆಂಬಲಿಸಿದ ಮೊದಲ ನಾಯಕ. ಇದನ್ನು ಕೇಜ್ರಿವಾಲ್‌ ಉಲ್ಲೇಖಿಸಿದರು.

ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಸಿಬಿಐ ಶುಕ್ರವಾರ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಿತ್ತು. ಈ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಜ್ರಿವಾಲ್‌ ಅವರಿಗೆ ಕರೆ ಮಾಡಿ ಮಾತನಾಡಿದ್ದರು.

ಈ ಸುದ್ದಿ ಓದಿದ್ದಿರಾ? ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

ಮಲ್ಲಿಕಾರ್ಜುನ ಖರ್ಗೆ ಅವರು ಕೇಜ್ರಿವಾಲ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧದ ಪ್ರತಿಪಕ್ಷಗಳ ಹೋರಾಟದಲ್ಲಿ ಎಎಪಿಯೂ ಮುಖ್ಯಪಾತ್ರ ವಹಿಸಿದೆ.

ನಿತೀಶ್‌ ಕುಮಾರ್‌ ದೆಹಲಿಗೆ ತೆರಳಿದಾಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹಾಗೂ ಕೇಜ್ರಿವಾಲ್‌ ಸಹ ಕಾಂಗ್ರೆಸ್‌ ಜೊತೆಗಿನ ಭೇಟಿಯಲ್ಲಿ ಜೊತೆಗಿದ್ದರು.

ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಈಗಾಗಲೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನ ಬಲ ಪ್ರಯೋಗಿಸುವ ಬಗ್ಗೆ ಚರ್ಚಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...