ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Date:

Advertisements
  • ಗಡುವಿನ ಅವಧಿ ಪೂರ್ಣಗೊಂಡ ನಂತರ ಅಮಿತ್ ಶಾ ಭೇಟಿಗೆ ಸಮಯ ಕೋರಿದ್ದ ಕುಸ್ತಿಪಟುಗಳು
  • ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 21 ರಿಂದ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ

ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಶನಿವಾರ (ಜೂನ್ 3) ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಹಾಗೂ ವಿನೇಶ್ ಫೋಗಟ್, ಸಂಗೀತಾ ಫೋಗಟ್ ಹಾಗೂ ಸತ್ಯವರ್ತಿ ಕಡಿಯನ್ ಅವರು ಶಾ ಅವರನ್ನು ಭೇಟಿಯಾಗಿ ಮಧ್ಯರಾತ್ರಿವರೆಗೂ ಮಾತುಕತೆ ನಡೆಸಿದರು.

ಅಮಿತ್ ಶಾ ಅವರ ಜತೆ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದರು. ಶೀಘ್ರ ದೋಷಾರೋಪ ಪಟ್ಟಿ ಸಲ್ಲಿಕೆಗೆ ಒತ್ತಾಯಿಸಿದರು.

Advertisements

ಅಲ್ಲದೆ ಏಳು ಮಹಿಳಾ ಕುಸ್ತಿಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಅವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದರು ಎಂದು ವರದಿ ಹೇಳಿದೆ.

ಬ್ರಿಜ್ ಭೂಷಣ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಂತರ್ ಮಂತರ್ ಎದುರು ಒಂದು ತಿಂಗಳಿನಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿಪಟುಗಳ ಜತೆ ಮಾತನಾಡಿದ ಅಮಿತ್ ಶಾ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾದ ಪ್ರಕರಣದಲ್ಲಿ ನಮೂದಿಸಿರುವ ಆರೋಪಗಳು ಸಾಬೀತಾಗಿವೆ ಎಂದು ವರದಿಯಾಗಿದೆ.

ಮಹಿಳಾ ಅಥ್ಲೀಟ್‌ಗಳ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವರನ್ನು ಅಸಮರ್ಪಕವಾಗಿ ಸ್ಪರ್ಶಿಸಿದ, ಮೈ ಸವರಿದ, ಮುಜುಗರ ಉಂಟುಮಾಡುವ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದ, ಟೂರ್ನಮೆಂಟ್ ಸಂದರ್ಭದಲ್ಲಿ
ಗಾಯಗೊಂಡರೆ ಸಂಸ್ಥೆಯೇ ಚಿಕಿತ್ಸೆ ವೆಚ್ಚ ಭರಿಸುವುದಕ್ಕೆ ಪ್ರತಿಯಾಗಿ ಲೈಂಗಿಕ ಸುಖದ ಬೇಡಿಕೆ ಇರಿಸಿದ ಆರೋಪಗಳನ್ನು ಬ್ರಿಜ್ ಭೂಷಣ್‌ ವಿರುದ್ಧ ದಾಖಲಿಸಲಾಗಿದೆ.

ಡಯಟೀಷಿಯನ್ ಅಥವಾ ಕೋಚ್ ಅನುಮೋದನೆ ನೀಡದ ಅಪರಿಚಿತ ಖಾದ್ಯವನ್ನು ತಿನ್ನಲು ನೀಡಿದ್ದರು. ಅಪ್ರಾಪ್ತ ವಯಸ್ಸಿನ ಆಟಗಾರ್ತಿಯ ಎದೆ ಸುತ್ತಲೂ ಕೈಗಳನ್ನು ಆಡಿಸಿದ್ದರು.

ಆಕೆಯನ್ನು ದುರುಗುಟ್ಟಿ ನೋಡುತ್ತಿದ್ದರು ಎಂದು ಕೂಡ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮ ತೆಗೆದುಕೊಳ್ಳಲು ಐದು ದಿನಗಳ ಗಡುವು ಶನಿವಾರ ಕೊನೆಗೊಂಡ ಬಳಿಕ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಮಿತ್‌ ಶಾ ಅವರ ಭೇಟಿಗೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

ಏಪ್ರಿಲ್ 21ರಂದು ದೆಹಲಿಯ ಕನ್ನೌಟ್ ಪ್ಲೇಸ್ ಪೊಲೀಸ್ ಠಾಣೆಗೆ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಕುಸ್ತಿಪಟುವಿನ ತಂದೆ ಕೂಡ ಏಪ್ರಿಲ್ 28ರಂದು ಪ್ರತ್ಯೇಕ ದೂರು ನೀಡಿದ್ದಾರೆ. ಎರಡೂ ಪ್ರಕರಣಗಳಿಂದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಒಟ್ಟು ಏಳು ಕುಸ್ತಿಪಟುಗಳ ಆರೋಪ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X