ನಕ್ಸಲ್ ನಾಯಕ ವಿಕ್ರಂ ಗೌಡ ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ: ಸಚಿವ ಪರಮೇಶ್ವರ್

Date:

Advertisements

ನಕ್ಸಲ್ ನಾಯಕ ವಿಕ್ರಂ ಗೌಡನ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ. ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ಈ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆ‌ ಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ” ಎಂದರು.

“ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು” ಎಂದು ಹೇಳಿದರು.

Advertisements

“ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, “ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ” ಎಂದು ಹೇಳಿದರು.

“ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ರೂ. ಅಕ್ರಮ ಎಸಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋದಿಯವರು 2015ರಲ್ಲಿ ಅಡಿಗಲ್ಲು ಹಾಕಿದ್ದರು. ಈವರೆಗು ಪೂರ್ಣಗೊಂಡಿಲ್ಲ. ಅಂಬೇಡ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದವರು. ಇಡೀ ದೇಶದ ಜನತೆ ಅವರನ್ನು ಇಷ್ಡಪಡುತ್ತಾರೆ. ಯೋಜನೆಯನ್ನು ಪೂರ್ಣಗೊಳಿಸದೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಜನ ಅಸಮಾದಾನ ವ್ಯಕ್ತಪಡಿಸಿದ್ದಾರೆ” ಎಂದರು‌.

“ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌. ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X