ಮೋದಿಯೊಂದಿಗೆ ವೇದಿಕೆ ಹಂಚಿಕೆ : ‘ಇಂಡಿಯಾ’ ಮೈತ್ರಿಯೊಳಗೆ ಗೊಂದಲ ಸೃಷ್ಟಿಸಿದ ಶರದ್ ಪವಾರ್ ನಡೆ

Date:

  • ಪ್ರಜಾಪ್ರಭುತ್ವದಲ್ಲಿ ಸಂಭಾಷಣೆ ಮುಖ್ಯವಾದುದು ಎಂದ ಪವಾರ್ ಪುತ್ರಿ
  • ‘ಗೊಂದಲವನ್ನು ಶರದ್ ಪವಾರ್ ಅವರೇ ನಿವಾರಿಸಬೇಕು’ ಎಂದ ಶಿವಸೇನೆ ಸಂಸದ

ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟ ರಚಿಸಿಕೊಂಡು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಸಮರ ಸಾರಿರುವ ನಡುವೆಯೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆ ಗೊಂದಲ ಸೃಷ್ಟಿಸಿದೆ.

- Advertisement -

ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ 103ನೇ ಪುಣ್ಯತಿಥಿಯ ಅಂಗವಾಗಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಶರದ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿ, ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಲ್ಲದೇ, ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದು ಹೋಗುತ್ತಿರುವ ವೇಳೆ ಮೋದಿ ಹಾಗೂ ಪವಾರ್ ಪರಸ್ಪರ ಆತ್ಮೀಯರಂತೆ ಮಾತನಾಡಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿ ಈವರೆಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿರುವುದು ಇಂಡಿಯಾ’ ಮೈತ್ರಿಯೊಳಗೂ ಗೊಂದಲಕ್ಕೂ ಎಡೆ ಮಾಡಿಕೊಟ್ಟಿದೆ.

ಈ ಬಗ್ಗೆ ಬಹಿರಂಗ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ‘ಮಹಾ ವಿಕಾಸ್ ಅಘಾಡಿ ಅಥವಾ ಇಂಡಿಯಾ ನಾಯಕರು ಇಂತಹ ಕಾರ್ಯಕ್ರಮಗಳಿಗೆ ಹೋದಾಗ, ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಇಂಡಿಯಾ ಒಕ್ಕೂಟದ ಸದಸ್ಯರಲ್ಲಿರುವ ಗೊಂದಲವನ್ನು ಶರದ್ ಪವಾರ್ ಅವರೇ ನಿವಾರಿಸಬೇಕು’ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹರಿಯಾಣದಲ್ಲಿ ಕೋಮು ಸಂಘರ್ಷ: ಐವರು ಬಲಿ; 30ಕ್ಕೂ ಹೆಚ್ಚು ಮಂದಿಗೆ ಗಾಯ

ಕಾರ್ಯಕ್ರಮದಲ್ಲಿ ತಂದೆಯ ಭಾಗವಹಿಸುವಿಕೆಯ ಬಗ್ಗೆ ಹೇಳಿಕೆ ನೀಡಿರುವ ಪುತ್ರಿ, ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ, ‘ಪ್ರಧಾನಮಂತ್ರಿ ಅವರಿಗೆ ಪ್ರಶಸ್ತಿ ನೀಡುವ ಸಮಾರಂಭದಲ್ಲಿ ಭಾಗವಹಿಸಿರುವ ತಂದೆಯ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಅವರು ನಮ್ಮ ದೇಶದ ಪ್ರಧಾನಿಯೇ ಹೊರತು ಬಿಜೆಪಿಯ ಪ್ರಧಾನಿಯಲ್ಲ. ಮಹಾರಾಷ್ಟ್ರ ಯಾವಾಗಲೂ ಒಬ್ಬ ವ್ಯಕ್ತಿಯ ಹುದ್ದೆಯನ್ನು ಗೌರವಿಸುತ್ತದೆ. ಬಾಳಾಸಾಹೇಬ್ ಠಾಕ್ರೆ ಮತ್ತು ನನ್ನ ತಂದೆ ಆಗಾಗ್ಗೆ ಒಬ್ಬರನ್ನೊಬ್ಬರು ಟೀಕಿಸುತ್ತಿದ್ದರು. ಆದರೂ ಯಾವಾಗಲೂ ಬಾಳಾಸಾಹೇಬರು ಆಯೋಜಿಸುತ್ತಿದ್ದ ಸಮಾರಂಭದಲ್ಲಿ ಭಾಗವಹಿಸುತ್ತಿದ್ದರು. ಪ್ರಜಾಪ್ರಭುತ್ವದಲ್ಲಿ ಸಂಭಾಷಣೆ ಮುಖ್ಯವಾದುದು’ ಎಂದು ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವು ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರಕಾರವನ್ನು ಸೇರುವುದರೊಂದಿಗೆ ಪವಾರ್ ಅವರ ಪಕ್ಷವು ಇತ್ತೀಚೆಗೆ ವಿಭಜನೆಯಾಗಿದ್ದನ್ನು ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...