ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

Date:

ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಲೋಕಾರ್ಪಣೆಯ ಕಾರ್ಯಕ್ರಮವು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆ, ಬೆಳವಣಿಗೆಗಳು ಒಂದೊಂದು ರಾಜ್ಯಗಳಲ್ಲಿ ಒಂದೊಂದು ವಿವಾದಗಳು ಉಂಟಾಗುತ್ತಿದೆ.

- Advertisement -

ಕರ್ನಾಟಕದಲ್ಲಿ ಸದ್ಯ ಬಿಜೆಪಿ ಹೇಳುತ್ತಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವು ವಿವಾದವಾಗಿದ್ದರೆ, ನೆರೆಯ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ನಾಯಕನೋರ್ವ ನೀಡಿರುವ ‘ರಾಮ ಮಾಂಸಾಹಾರಿ’ ಹೇಳಿಕೆಯು ವಿವಾದ ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎನ್​ಸಿಪಿ ಶರದ್ ಪವಾರ್ ಬಣದ ಶಾಸಕ ಮತ್ತು ಮಾಜಿ ಸಚಿವ ಜಿತೇಂದ್ರ ಆವ್ಹಾದ್​, ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆಯುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಜಿತೇಂದ್ರ ಅವರ ಈ ಹೇಳಿಕೆಗೆ ಸಂಬಂಧಿಸಿದಂತೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕೂಡ ಮುಂಬೈನಲ್ಲಿ ಪ್ರತಿಭಟನೆ ನಡೆಸಿದೆ.

“ರಾಮ ನಮ್ಮವನು, ಬಹುಜನರಿಗೆ ಸೇರಿದವನು. ರಾಮ ಬೇಟೆಯಾಡಿ ಪ್ರಾಣಿಗಳನ್ನು ತಿನ್ನುತ್ತಿದ್ದ. ನಾವು ರಾಮನನ್ನು ಆದರ್ಶ ಎಂದು ಪರಿಗಣಿಸಿ ಕುರಿ ಮಾಂಸ ತಿನ್ನುತ್ತೇವೆ. ಇದು ರಾಮನ ಆದರ್ಶ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ” ಎಂದು ಅವರು ಹೇಳಿದರು.

“ರಾಮ ಕ್ಷತ್ರಿಯ, ಕ್ಷತ್ರಿಯರು ಎಂದೂ ಮಾಂಸಾಹಾರಿಗಳು, ರಾಮ ಕೂಡ ಮಾಂಸಾಹಾರಿಯಾಗಿದ್ದ. ಬಿಜೆಪಿ ಮತ್ತು ಆರ್‍‌ಎಸ್‌ಎಸ್‌ನವರು ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿಸಲು ಹೊರಟಿದ್ದಾರಾ? ಈ ದೇಶದ 80 ಶೇ. ಜನರು ಮಾಂಸಾಹಾರಿಗಳು. ಅವರಲ್ಲಿ ರಾಮಭಕ್ತರೂ ಕೂಡ ಇಲ್ಲವೇ. ಇದರಲ್ಲಿ ವಿವಾದ ಏನಿದೆ?” ಎಂದು ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತೆರಳುತ್ತಿದ್ದ ವೇಳೆ ಜಿತೇಂದ್ರ ಆವ್ಹಾದ್ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಲವು ಬಿಜೆಪಿ ಮುಖಂಡು, “ಜಿತೇಂದ್ರ ಆವ್ಹಾದ್​ ನೀಡಿರುವ ಹೇಳಿಕೆಯು ಹಾಸ್ಯಾಸ್ಪದ. ಶ್ರೀರಾಮ ಕಾಡಿನಲ್ಲಿ ಏನು ತಿನ್ನುತ್ತಿದ್ದರು ಎಂಬುದನ್ನು ನೋಡಲು ಹೋಗಿದ್ದರೇ? ಜ.22ರಂದು ರಾಮ ಮಂದಿರದ ಅದ್ಧೂರಿ ಉದ್ಘಾಟನೆ ನಡೆಯುತ್ತಿರುವುದರಿಂದ ಇಂಡಿಯಾ ಮೈತ್ರಿಕೂಟದ ಜನರಿಗೆ ಹೊಟ್ಟೆ ನೋವು ಅಷ್ಟೆ, ಇಷ್ಟು ದೊಡ್ಡ ಹೇಳಿಕೆ ನೀಡಿದ ನಂತರವೂ ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಏಕೆ ಮೌನವಾಗಿದ್ದಾರೆ? ಸನಾತನ ಧರ್ಮವನ್ನು ಅವಹೇಳನ ಮಾಡಿದ್ದಾರೆ” ಎಂದು ಕಿಡಿಕಾರುತ್ತಿದ್ದಾರೆ.

ಕ್ಷಮೆಯಾಚನೆ

“ಸಂಶೋಧನೆ ಇಲ್ಲದೆ ಮಾತನಾಡಿಲ್ಲ. ಈ ಬಗ್ಗೆ ಮೂಲ ರಾಮಾಯಣದಲ್ಲೇ ಉಲ್ಲೇಖವಿದೆ. ಆದರೆ ನನ್ನ ಹೇಳಿಕೆಯಿಂದ ಭಾವನೆಗೆ ಧಕ್ಕೆಯಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿಕೆಯು ವಿವಾದ ಉಂಟು ಮಾಡಿದ ನಂತರ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ತಿಳಿಸುವ ಮೂಲಕ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ರಾಮಾಯಣದ ಕೆಲವೊಂದು ಅಧ್ಯಾಯಗಳನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...