ಮಹಾರಾಷ್ಟ್ರ ರಾಜಕೀಯಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳು ಎರಡನೇ ದಿನವೂ ಮುಂದುವರೆದಿದ್ದು, ಎನ್‌ಸಿಪಿಯಿಂದ ಬಂಡೆದ್ದ ನಾಯಕರಲ್ಲಿ ಸಂಸದರಾದ ಪ್ರಫುಲ್ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಅನರ್ಹಗೊಳಿಸಲಾಗಿದೆ.
ಹಾಗೆಯೇ ಇವರಿಬ್ಬರು ಸಂಸದರನ್ನು ಒಳಗೊಂಡು 9 ಶಾಸಕರನ್ನು ಅನರ್ಹಗೊಳಿಸುವಂತೆ ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದ್ದು, ಮೂವರೂ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ
ಎನ್‌ಸಿಪಿಯ ಇಬ್ಬರು ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರು ನಮ್ಮ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 9 ಶಾಸಕರ ಪ್ರಮಾಣ ವಚನ ಸಮಾರಂಭವನ್ನು ಸುಗಮಗೊಳಿಸುವ ಮತ್ತು ಮುನ್ನಡೆಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಲು ನಾನು ನಿಮಗೆ ಅತ್ಯಂತ ತುರ್ತಾಗಿ ಪತ್ರ ಬರೆಯುತ್ತಿದ್ದೇನೆ ಎಂದು ಎನ್‌ಸಿಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಸುಪ್ರಿಯಾ ಸುಳೆ ಅವರು ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ.
ಎನ್‌ಸಿಪಿಯ ಶಿಸ್ತು ಸಮಿತಿಯು ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಳ್ಳಲು ಅಜಿತ್ ಪವಾರ್ ಅವರನ್ನು ಬೆಂಬಲಿಸಿದ 9 ಶಾಸಕರನ್ನು ಅನರ್ಹಗೊಳಿಸುವಂತೆ ಕರೆ ನೀಡಿದೆ. ಎನ್‌ಸಿಪಿಯ 9 ಶಾಸಕರನ್ನು ತಕ್ಷಣ ಅನರ್ಹಗೊಳಿಸಬೇಕು. ಅವರನ್ನು ಸದಸ್ಯರಾಗಿ ಮುಂದುವರಿಯಲು ಅವಕಾಶ ನೀಡಿದರೆ, ಅವರು ಪಕ್ಷದ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದನ್ನು ಮುಂದುವರೆಸುವ ಸಾಧ್ಯತೆಯಿದೆ ಎಂದು ಎನ್‌ಸಿಪಿಯ ಶಿಸ್ತು ಸಮಿತಿ ಹೇಳಿದೆ.
ಕಳ್ಳತನ ಮಾಡಿ ಸರಕಾರ ಮಾಡಿ ಭ್ರಷ್ಟಾಚಾರ ಮಾಡುವುದೇ ಬಿಜೆಪಿ ಉದ್ಯೋಗ, ಕರ್ನಾಟಕದ ಸ್ಥಿತಿಯೇ ನಿಮಗೂ ಬರಲಿದೆ.