ರಾಜಕೀಯ ಪ್ರಚಾರಕ್ಕಾಗಿ 225 ಕೋಟಿ ರೂ. ದುರುಪಯೋಗಪಡಿಸಿದ ಬಿಹಾರ ಸರ್ಕಾರ: ತೇಜಸ್ವಿ ಆರೋಪ

Date:

ನಿತೀಶ್ ಕುಮಾರ್ ನೇತೃತ್ವದ ಬಿಹಾರ ಎನ್‌ಡಿಎ ಸರ್ಕಾರವು ರಾಜಕೀಯ ಪ್ರಚಾರಕ್ಕಾಗಿ 225 ಕೋಟಿ ರೂ. ದುರುಪಯೋಗಪಡಿಸಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಆರೋಪಿಸಿದ್ದಾರೆ.

- Advertisement -

ತುರ್ತು ಪತ್ರಿಕಾಗೋಷ್ಠಿ ಕರೆದ ತೇಜಸ್ವಿ ಯಾದವ್ ಅವರು, “ಬಿಹಾರದ ಸ್ಥಳೀಯ ಗುತ್ತಿಗೆದಾರರನ್ನು ಸರ್ಕಾರ ಕಡೆಗಣಿಸುತ್ತಿದೆ. ಬಿಹಾರದ ಹೊರಗಿನ ಸಂಸ್ಥೆಗಳು ಮತ್ತು ಖಾಸಗಿ ಕಂಪನಿಗಳಿಗೆ ಗುತ್ತಿಗೆಯನ್ನು ನೀಡಲಾಗುತ್ತಿದೆ. ಗುತ್ತಿಗೆಗಳನ್ನು ನೀಡುವುದಕ್ಕಾಗಿ ಸಂಪುಟ ಸಚಿವರು ಗುತ್ತಿಗೆದಾರರಿಂದ ಹಣವನ್ನು ಪಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

“ಬಿಹಾರದಲ್ಲಿ ಎನ್‌ಡಿಎ ಆಡಳಿತವು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಯೋಜನೆಗಳ ಅಂದಾಜು ವೆಚ್ಚದಲ್ಲಿ ಸುಮಾರು ಶೇಕಡ 30ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಚುನಾವಣೆಗೆ ಸಂಬಂಧಿಸಿದ ಕೆಲಸಗಳಿಗೆ ಟೆಂಡರ್‌ಗಳನ್ನು ನೀಡಲಾಗುತ್ತಿದೆ. ಚುನಾವಣಾ ಆಯೋಗದಿಂದ ಅನುಮೋದನೆ ಪಡೆದ ನಂತರವೇ ಬಿಲ್‌ಗಳನ್ನು ತೆರವುಗೊಳಿಸಲಾಗುತ್ತಿದೆ” ಎಂದು ಹೇಳಿದರು.

“2025ರ ವಿಧಾನಸಭೆ ಚುನಾವಣೆಯಲ್ಲಿ ಅವರು (ಎನ್‌ಡಿಎ ಒಕ್ಕೂಟ) ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ತಿಳಿದಿದೆ. ಹಾಗಾಗಿ, ಅವರು ಭಯಭೀತರಾಗಿದ್ದಾರೆ. ಒಂದಲ್ಲ ಒಂದು ನೆಪ ಹೇಳಿ ಜನರ ಹಣವನ್ನು ಲೂಟಿ ಮಾಡಲು ಯತ್ನಿಸುತ್ತಿದ್ದಾರೆ. ಸರ್ಕಾರ ಯುವಕರಿಗಾಗಿ ಅಧಿಕ ಸಾರ್ವಜನಿಕ ಹಣ ವೆಚ್ಚ ಮಾಡುತ್ತಿದ್ದರೂ ಇಲ್ಲಿನ ಯುವಕರಿಗೆ ಇಲ್ಲಿ ಉದ್ಯೋಗವೇ ಸಿಗುತ್ತಿಲ್ಲ” ಎಂದರು.

“ಸರ್ಕಾರದ ಸಾಲವು 4.06 ಲಕ್ಷ ಕೋಟಿ ರೂ.ಗಳನ್ನು ದಾಟಿದೆ. ಹರ್ ಘರ್ ಕೋ ನಲ್ ಕಾ ಜಲ್ ಯೋಜನೆಗೆ ಸುಮಾರು 25,000ರಿಂದ 30,000 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಆದರೆ ಈ ಯೋಜನೆಯಡಿಯಲ್ಲಿ ನಿಜವಾಗಿ ಏನಾಗುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ” ಎಂದು ಸರ್ಕಾರವನ್ನು ತೇಜಸ್ವಿ ಟೀಕಿಸಿದರು.

ಇದನ್ನು ಓದಿದ್ದೀರಾ? ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

ಇನ್ನು ತೇಜಸ್ವಿ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ನಡೆದಿರುವ ಒಟ್ಟು ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನೂ ಒದಗಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಇತ್ತೀಚೆಗೆ ಪ್ರಾರಂಭಿಸಿದ ‘ಮಹಿಳಾ ಸಂವಾದ’ ಹೆಸರಿನಲ್ಲಿ ಎನ್‌ಡಿಎ ಸರ್ಕಾರ 225 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಆರೋಪಿಸಿದರು.

“ಚುನಾವಣಾ ಪ್ರಚಾರಕ್ಕಾಗಿ ಸುಮಾರು 600 ಡಿಜಿಟಲ್ ಪ್ರಚಾರ ವಾಹನಗಳನ್ನು ತರಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿಕೂಟವು ಸಾರ್ವಜನಿಕ ಹಣವನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದೆ” ಎಂದು ದೂರಿದರು.

“ಸರ್ಕಾರವು ಚುನಾವಣಾ ಪ್ರಚಾರಕ್ಕೆ ಹೊಸ ತಂತ್ರವನ್ನು ಬಳಸುತ್ತಿದೆ. ಸಾರ್ವಜನಿಕ ಕ್ಷೇತ್ರಗಳ ವೆಚ್ಚಕ್ಕಾಗಿ ಮೀಸಲಿಟ್ಟ ಹಣವನ್ನೇ ತಮ್ಮ ರಾಜಕೀಯ ಪ್ರಚಾರಕ್ಕಾಗಿ ದುರುಪಯೋಗ ಮಾಡುತ್ತಿದೆ. ಎನ್‌ಡಿಎ ಆಳ್ವಿಕೆಯಲ್ಲಿ ನಿರ್ಮಿಸಲಾದ ಸುಮಾರು 5,000 ಸಣ್ಣ ಸೇತುವೆಗಳು ಮತ್ತು ಕಲ್ವರ್ಟ್‌ಗಳು ಇನ್ನೂ ಬಳಕೆಯಾಗಿದೆ. ಹಾಗೆಯೇ ನಿಷ್ಕ್ರೀಯವಾಗಿ ಉಳಿದಿವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...