ತಪ್ಪಿ ರಚನೆಯಾದ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

Date:

“ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವು ತಪ್ಪಿ ರಚನೆಯಾಗಿದ್ದು ಯಾವಾಗ ಬೇಕಾದರೂ ಬೀಳಬಹುದು” ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -

ಇತ್ತೀಚೆಗೆ ಲೋಕಸಭೆ ಚುನಾವಣೆಯು ಕೊನೆಯಾಗಿದ್ದು ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿದೆ. ಬಹುಮತ 272 ಆಗಿದ್ದು ಅದಕ್ಕಿಂತ ಕಡಿಮೆ ಸ್ಥಾನವನ್ನು ಬಿಜೆಪಿ ಪಡೆದಿದೆ. ಮಿತ್ರ ಪಕ್ಷಗಳ ಮೇಲೆ ಅವಲಂಬಿಸಿ ಸರ್ಕಾರ ರಚಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, “ತಪ್ಪಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿ ಅವರಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು” ಎಂದು ಲೇವಡಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಎನ್‌ಡಿಎ ಸರ್ಕಾರ ಐದು ವರ್ಷ ಉಳಿಯಲ್ಲ: ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್

“ಈ ಸರ್ಕಾರ ಮುಂದುವರಿಯಲು ನಾವು ಬಯಸುತ್ತೇವೆ. ದೇಶಕ್ಕೆ ಒಳ್ಳೆಯದಾಗಲಿ. ನಾವು ಒಟ್ಟಾಗಿ ದೇಶವನ್ನು ಬಲಗೊಳಿಸಲು ಶ್ರಮಿಸಬೇಕು. ಆದರೆ ನಮ್ಮ ಪ್ರಧಾನಿ ಯಾವುದೂ ಕೂಡಾ ಸರಿಯಾಗಿ ನಡೆಯಲು ಬಿಡಲ್ಲ. ನಾವು ಮಾತ್ರ ದೇಶವನ್ನು ಬಲಪಡಿಸಲು ಸಹಕರಿಸುತ್ತೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹೊಸ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಇಂಡಿಯಾ ಒಕ್ಕೂಟದ ಏಕೈಕ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಆಗಿದ್ದರು. ಇದು “ಸಾಂವಿಧಾನಿಕ ಕರ್ತವ್ಯ” ಎಂದು ಖರ್ಗೆ ಹೇಳಿದ್ದಾರೆ.

“ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ನನ್ನ ಸಾಂವಿಧಾನಿಕ ಕರ್ತವ್ಯ ಇದಾಗಿರುವುದರಿಂದ ನಾನು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದೇನೆ” ಎಂದು ಖರ್ಗೆ ಸುದ್ದಿಗಾರರಿಗೆ ತಿಳಿಸಿದ್ದರು. ಹಾಗೆಯೇ ಮೋದಿ ಅವರನ್ನು ಅಭಿನಂದಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಭೇಟಿಯಾದರೆ ನೋಡುತ್ತೇನೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...