ಬಿಹಾರ ಚುನಾವಣೆ | ನೀತಿ ಸಂಹಿತೆ ಉಲ್ಲಂಘಿಸಿದ ಎನ್‌ಡಿಎ ಸರ್ಕಾರ: ಆಯೋಗಕ್ಕೆ ಆರ್‌ಜೆಡಿ ಪತ್ರ

Date:

ಅಕ್ಟೋಬರ್ 17, 24 ಮತ್ತು 31ರಂದು ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಹಣ ವರ್ಗಾವಣೆ ಮಾಡುವ ಮೂಲಕ ಬಿಹಾರದ ಎನ್‌ಡಿಎ ಸರ್ಕಾರ ಬಿಹಾರ ಚುನಾವಣೆಗೂ ಮುನ್ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಆರ್‌ಜೆಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಈ ಬಗ್ಗೆ ಹಿರಿಯ ಆರ್‌ಜೆಡಿ ಸಂಸದ ಮನೋಜ್ ಕೆ ಝಾ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹಣ ಬಿಡುಗಡೆ ಮಾಡಿರುವುದು ಅಕ್ಟೋಬರ್ 6ರಂದು ಜಾರಿಗೆ ಬಂದ ನೀತಿ ಸಂಹಿತೆಯ ಸ್ಪಷ್ಟ ಮತ್ತು ಉದ್ದೇಶಪೂರ್ವಕ ಉಲ್ಲಂಘನೆಯಾಗಿದೆ. ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ನಾಲ್ಕು ದಿನಗಳ ಮೊದಲು ನವೆಂಬರ್ 7ರಂದು ಮತ್ತೆ ಹಣ ಬಿಡುಗಡೆ ಮಾಡಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಚುನಾವಣೆ 2023 | ಕಣದಲ್ಲಿದ್ದಾರೆ ಕ್ರಿಮಿನಲ್ ಕೇಸುಗಳ ನೂರಾರು ಆಪಾದಿತರು           

“ಈ ಅವಧಿಯಲ್ಲಿ ಯಾವುದೇ ಯೋಜನೆಯ ಹಣವನ್ನು ವಿತರಿಸುವುದು, ಸಂಹಿತೆಯ ಉಲ್ಲಂಘಟನೆಯಾಗಿದೆ. ವಿಶೇಷವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ನೀತಿ ಸಂಹಿತೆ ಜಾರಿಯಾದ ಮತ್ತು ಮತದಾನಕ್ಕೆ ಕೆಲವೇ ವಾರಗಳು ಇರುವಾಗ ನಗದು ವರ್ಗಾವಣೆ ಮಾಡಿರುವುದು ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದೆ” ಎಂದು ಪತ್ರದಲ್ಲಿ ದೂರಲಾಗಿದೆ.

ಇನ್ನು ಈ ಬಗ್ಗೆ ತಕ್ಷಣ ಮತ್ತು ಬಲವಾದ ಕ್ರಮ ಕೈಗೊಳ್ಳುವಂತೆಯೂ ಮನೋಜ್ ಕೆ ಝಾ ಒತ್ತಾಯಿಸಿದ್ದಾರೆ. ಈ ಪ್ರಕರಣದಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳುವುದು ಚುನಾವಣೆ ವೇಳೆ ಯಾವುದೇ ಬೆಲೆ ತೆತ್ತಾದರೂ ಸಾಂವಿಧಾನಿಕ ಆದೇಶವನ್ನು ಎತ್ತಿ ಹಿಡಿಯಲಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದಂತಾಗುತ್ತದೆ” ಎಂದು ತಿಳಿಸಿದ್ದಾರೆ.

ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಮುಖ್ಯಮಂತ್ರಿ ‘ಮಹಿಳಾ ರೋಜ್‌ಗಾರ್ ಯೋಜನೆ’ಯನ್ನು ಪ್ರಾರಂಭಿಸಿದ್ದು, ಮಹಿಳೆಯರು ಸ್ವಂತ ಉದ್ಯಮ ಆರಂಭಿಸಲು ಹತ್ತು ಸಾವಿರ ರೂಪಾಯಿ ಆರಂಭಿಕ ಆರ್ಥಿಕ ಅನುದಾನವನ್ನು ನೀಡುತ್ತದೆ. ಸದ್ಯ ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸರ್ಕಾರ ಯಾವುದೇ ಹೊಸ ಯೋಜನೆಗಳ ಹಣ ಬಿಡುಗಡೆ ಮಾಡುವಂತಿಲ್ಲ. ಮಹಿಳಾ ರೋಜ್‌ಗಾರ್ ಯೋಜನೆಯೂ ಹೊಸ ಯೋಜನೆಯಾಗಿದ್ದು, ಸೆಪ್ಟೆಂಬರ್‌ನಲ್ಲಿ ಆರಂಭಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...