ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

Date:

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.

- Advertisement -

ಮಾಜಿ ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಅವರು ಎಲ್‌ಜೆಪಿಯನ್ನು ವಿಭಜಿಸಿದಾಗ ಪಾರಸ್ ಪರವಾಗಿ ನಿಂತಿದ್ದ ಕೈಸರ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದಾದ ಬಳಿಕ ರಾಜಿ ಮಾತುಕತೆ ನಡೆದರೂ ಕೂಡಾ ಅದನ್ನು ಒಪ್ಪದ ಕೈಸರ್ ತೇಜಸ್ವಿ ಯಾದವ್ ಸಮ್ಮುಖದಲ್ಲಿ ಆರ್‌ಜೆಡಿ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಅವರೊಂದಿಗಿನ ಸಭೆಯ ನಂತರ ಕೈಸರ್ ಸಾಹೇಬ್ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಅವರ ಅನುಭವ ನಮಗೆ ಲಾಭ ನೀಡಲಿದೆ. ಇದು ಬಿಜೆಪಿ ಆಡಳಿತದಲ್ಲಿ ಅಪಾಯಕ್ಕೆ ಸಿಲುಕಿರುವ ನಮ್ಮ ಸಂವಿಧಾನವನ್ನು ರಕ್ಷಿಸುವ ನಮ್ಮ ಹೋರಾಟದ ಪರವಾಗಿ ಬಲವಾದ ಸಂದೇಶವನ್ನು ನೀಡುತ್ತದೆ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರ್‌ ಅನ್ನು ಆಳಿದ ಕುಟುಂಬದಲ್ಲಿ ಜನಿಸಿದ ಕೈಸರ್ ಅವರು ಕಾಂಗ್ರೆಸ್‌ನಲ್ಲಿ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದು 2013 ರವರೆಗೆ ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದರು.ಅವರು 2014 ರಲ್ಲಿ ಎಲ್‌ಜೆಪಿ ಸೇರಿದ್ದು ಐದು ವರ್ಷಗಳ ನಂತರ ಖಗರಿಯಾ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

2020 ರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿಯು ಕೈಸರ್ ಅವರ ಪುತ್ರ ಯೂಸುಫ್ ಸಲಾವುದ್ದೀನ್‌ಗೆ ಟಿಕೆಟ್ ನಿರಾಕರಿಸಿದ ಬಳಿಕ ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಜೊತೆಗಿನ ಕೈಸರ್ ಸಂಬಂಧ ಹದಗೆಡಲು ಆರಂಭವಾಗಿದೆ. 2020ರಲ್ಲಿ ಕೈಸರ್ ಅವರ ಪುತ್ರ ಸಲಾವುದ್ದೀನ್ ಆರ್‌ಜೆಡಿ ಟಿಕೆಟ್‌ನಲ್ಲಿ ಸಿಮ್ರಿ ಭಕ್ತಿಯಾರ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದರು.

ಈಗ 23 ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಆರ್‌ಜೆಡಿ, ಈಗ ಚುನಾವಣೆಯಲ್ಲಿ ಕೈಸರ್ ಅವರನ್ನು ಕಣಕ್ಕಿಳಿಸಲಿದೆಯೇ ಎಂಬ ಚರ್ಚೆಯಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...