ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

Date:

ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸಿದ್ದ’ ಎಂದು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದೆ. ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದ್ದನ್ನು ಕಾರ್ಯಕ್ರಮದಲ್ಲೇ ವಿರೋಧಿಸಿದ ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ, ಎನ್‌ಡಿಟಿವಿಯ ನಿರೂಪಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

“ಒಂದು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸುವುದು, ಸಂಬೋಧಿಸುವುದು ಸರಿಯಾದ ನಡೆಯಲ್ಲ” ಎಂದು ಎನ್‌ಡಿಟಿವಿ ವಿರುದ್ಧ ಭವ್ಯಾ ಕಿಡಿಕಾರಿದ್ದಾರೆ. ಭವ್ಯಾ ಅವರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಅವರನ್ನು ಎನ್‌ಡಿಟಿವಿ ಪೂರ್ಣ ಹೆಸರಿನಲ್ಲಿ ಉಲ್ಲೇಖಿಸಿದೆ. ಮಾತ್ರವಲ್ಲದೆ, ನಿರೂಪಕಿ ಕಾರ್ಯಕ್ರಮದಲ್ಲೇ ಕ್ಷಮೆ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಚರ್ಚಾ ಕಾರ್ಯಕ್ರಮದಲ್ಲಿ ಎನ್‌ಡಿಟಿವಿಯನ್ನು ತರಾಟೆಗೆ ತೆಗೆದುಕೊಂಡಿದ್ದ ವಿಡಿಯೋ ತುಣುಕನ್ನು ಸ್ವತಃ ಭವ್ಯಾ ನರಸಿಂಹಮೂರ್ತಿ ಅವರೇ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ, “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಯನ್ನು ‘ಸಿದ್ದ’ ಎಂದು ಉಲ್ಲೇಖಿಸಿದ್ದೀರಿ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹೀಗೆ ಉಲ್ಲೇಖಿಸುವುದು ಗೌರವಾರ್ಥವಲ್ಲ. ನಾವು ಪ್ರಧಾನಿ ಮೋದಿ ಅವರನ್ನು ‘ನರೇಂದ್ರ’ ಅಥವಾ ‘ನರೇನ್’ ಎಂದು ಬಳಸುವುದಿಲ್ಲ. ನರೇಂದ್ರ ಮೋದಿ ಅವರು ಕೊನೆಯ ಹೆಸರನ್ನು (ಮೋದಿ) ಹೊಂದಿದ್ದಾರೆ. ಆದರೆ, ಸಿದ್ದರಾಮಯ್ಯ ಕೊನೆಯ ಹೆಸರನ್ನು ಹೊಂದಿಲ್ಲ” ಎಂದಿದ್ದಾರೆ.

“ಸಿದ್ದರಾಮಯ್ಯ ಕರ್ನಾಟಕದ ಪ್ರಮುಖ ನಾಯಕರು. ಸಿದ್ದರಾಮಯ್ಯ ಅವರ ಹೆಸರನ್ನು ಪೂರ್ಣವಾಗಿ ಉಲ್ಲೇಖಿಸಿ, ಗೌರವ ಕೊಡಬೇಕು. ಅವರಿಗೆ ಅವರ ಸಾಂವಿಧಾನಿಕ ಉನ್ನತ ಹುದ್ದೆಯೊಂದಿಗೆ ಹೆಚ್ಚು ಗೌರವವನ್ನು ನೀಡಬೇಕು” ಎಂದು ಚರ್ಚಾ ಕಾರ್ಯಕ್ರಮದಲ್ಲೇ ಒತ್ತಾಯಿಸಿದ್ದಾರೆ. ಈ ವೇಳೆ ನಿರೂಪಕಿ ಕ್ಷಮೆ ಕೇಳಿದ್ದಲ್ಲದೇ, ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...