ನೀಟ್ ಪ್ರಕರಣ | ಶಿಕ್ಷಣ ಸಚಿವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ: ರಾಹುಲ್ ಗಾಂಧಿ

Date:

ನೀಟ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ ಎಂದು ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.

- Advertisement -

ಸೋಮವಾರ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನೀಟ್ ಮಾತ್ರವಲ್ಲ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿಯೇ ಬಹಳ ಗಂಭೀರವಾದ ಸಮಸ್ಯೆಯಿದೆ ಎಂಬುವುದು ಇಡೀ ದೇಶಕ್ಕೆ ಸ್ಪಷ್ಟವಾಗಿದೆ. ಸಚಿವರು [ಧರ್ಮೇಂದ್ರ ಪ್ರಧಾನ್] ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ ಎಂಬುದರ ಪ್ರಾಥಮಿಕ ವಿಚಾರವನ್ನೂ ಕೂಡ ಅವರು ಅರ್ಥಮಾಡಿಕೊಳ್ಳುತ್ತಿದ್ದಾರೆ ಅನಿಸುವುದಿಲ್ಲ” ಎಂದು ಹೇಳಿದರು.

“ನಮ್ಮ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಭಾರತೀಯ ಪರೀಕ್ಷಾ ವ್ಯವಸ್ಥೆಯು ಮೋಸದಿಂದ ಕೂಡಿದೆ ಎಂದು ನಂಬಿದ್ದಾರೆ. ನೀವು ಶ್ರೀಮಂತರಾಗಿದ್ದರೆ ಮತ್ತು ನಿಮ್ಮ ಬಳಿ ಹಣವಿದ್ದರೆ, ನೀವು ಭಾರತೀಯ ಪರೀಕ್ಷಾ ವ್ಯವಸ್ಥೆಯನ್ನು ಖರೀದಿಸಬಹುದು ಎಂದು ಲಕ್ಷಾಂತರ ಜನರು ನಂಬುತ್ತಾರೆ. ಪ್ರತಿಪಕ್ಷಗಳು ಹೊಂದಿರುವುದು ಕೂಡ ಅದೇ ಭಾವನೆಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನೀಟ್ ವಿಚಾರದಲ್ಲಿ ಪ್ರತ್ಯೇಕ ಒಂದು ದಿನದ ಚರ್ಚೆಗೆ ಒತ್ತಾಯಿಸಿದರು.

ಇನ್ನು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಎಸ್‌ಪಿ ನಾಯಕ, ಸಂಸದ ಅಖಿಲೇಶ್ ಯಾದವ್, “ಈ ಸರ್ಕಾರವು ಪೇಪರ್ ಸೋರಿಕೆಯ ದಾಖಲೆಯನ್ನು ಮಾಡುತ್ತದೆ. ಕೆಲವು ಕೇಂದ್ರಗಳಲ್ಲಿ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಸಚಿವರು (ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್) ಇರುವವರೆಗೂ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವುದಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ನೀಟ್ ವಿವಾದ | ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ: ಸುಪ್ರೀಂ ಕೋರ್ಟ್

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಪ್ರಧಾನ್, ”ತಮ್ಮ ಕಣ್ಗಾವಲಿನಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ” ಎಂದು ಹೇಳಿದರು. “ಕಳೆದ ಏಳು ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಎನ್‌ಟಿಎ 240ಕ್ಕೂ ಹೆಚ್ಚು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ನಾನು ಸಂಪೂರ್ಣ ಜವಾಬ್ದಾರಿಯಿಂದ ಹೇಳಬಲ್ಲೆ” ಎಂದಿದ್ದಾರೆ.

ಇನ್ನು ಎಸ್‌ಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಧರ್ಮೇಂದ್ರ ಪ್ರಧಾನ್, “ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪರೀಕ್ಷೆಯ ಫಲಿತಾಂಶಗಳನ್ನು ಸಾರ್ವಜನಿಕಗೊಳಿಸಲಾಗಿದೆ. ನಾನು ಈ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ, ಆದರೆ ಅಖಿಲೇಶ್ ಯಾದವ್ ಅವರು ಉಸ್ತುವಾರಿ ವಹಿಸಿದ್ದಾಗ ಎಷ್ಟು ಪೇಪರ್ ಸೋರಿಕೆಯಾಗಿದೆ ಎಂಬ ಪಟ್ಟಿ ನನ್ನ ಬಳಿ ಇದೆ” ಎಂದು ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...