ನೀಟ್ ಪರೀಕ್ಷೆ ವಿವಾದ| ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ: ವಿದ್ಯಾರ್ಥಿಗಳಿಗೆ ರಾಹುಲ್ ಭರವಸೆ

Date:

ನೀಟ್ ಯುಜಿ ವೈದ್ಯಕೀಯ ಪ್ರವೇಶದ ವಿವಾದಗಳ ಬಗ್ಗೆ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ‘ಅಕ್ರಮಗಳು’ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿನಾಶ ಮಾಡಿದೆ ಎಂದು ಆರೋಪಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಸಂಸತ್ತಿನಲ್ಲಿ ತಮ್ಮ ಧ್ವನಿಯಾಗುತ್ತೇನೆ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಲವಾಗಿ ಧ್ವನಿ ಎತ್ತುತ್ತೇನೆ” ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ?  ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

“ನರೇಂದ್ರ ಮೋದಿ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ ಮತ್ತು ನೀಟ್ ಪರೀಕ್ಷೆಯಲ್ಲಿನ ವಿವಾದ ವಂಚನೆ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಧ್ವಂಸಗೊಳಿಸಿದೆ” ಎಂದು ಆರೋಪಿಸಿದರು.

“ಒಂದೇ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ತಾಂತ್ರಿಕವಾಗಿ ಸಾಧ್ಯವಾಗದ ಅಂಕಗಳು ಅದೆಷ್ಟೋ ಜನರಿಗೆ ಲಭಿಸಿದೆ. ಆದರೆ ಪತ್ರಿಕೆ ಸೋರಿಕೆಯ ಸಾಧ್ಯತೆಯನ್ನು ಸರ್ಕಾರ ನಿರಂತರವಾಗಿ ನಿರಾಕರಿಸುತ್ತಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ?  ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

“ಶಿಕ್ಷಣ ಮಾಫಿಯಾ ಮತ್ತು ಸರ್ಕಾರಿ ತಂತ್ರ ಶಾಮೀಲಾಗಿ ನಡೆಯುತ್ತಿರುವ ಈ ‘ಪೇಪರ್ ಲೀಕ್ ಉದ್ಯಮ’ವನ್ನು ಎದುರಿಸಲು ಕಾಂಗ್ರೆಸ್ ದೃಢವಾದ ಯೋಜನೆಯನ್ನು ರೂಪಿಸಿತ್ತು. ನಮ್ಮ ಪ್ರಣಾಳಿಕೆಯಲ್ಲಿ, ಕಾನೂನನ್ನು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪೇಪರ್ ಸೋರಿಕೆಯಿಂದ ಮುಕ್ತಗೊಳಿಸಲು ನಾವು ನಿರ್ಧರಿಸಿದ್ದೆವು” ಎಂದು ಕೂಡಾ ರಾಹುಲ್ ಗಾಂಧಿ ತಿಳಿಸಿದರು

“ಇಂದು ನಾನು ದೇಶದ ಎಲ್ಲ ವಿದ್ಯಾರ್ಥಿಗಳ ಪರವಾಗಿ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ. ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಲವಾಗಿ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟ ನಿಮ್ಮ ಧ್ವನಿಯನ್ನು ಹತ್ತಿಕ್ಕಲು ಬಿಡುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...