ನೀಟ್ ಅಕ್ರಮ | ಯಾರನ್ನೋ ರಕ್ಷಿಸಲು ಮೋದಿ ಸರ್ಕಾರ ಪ್ರಯತ್ನ: ಸಚಿವ ಶರಣ್ ಪ್ರಕಾಶ್ ಪಾಟೀಲ್

Date:

ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

- Advertisement -

ರಾಯಚೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ” ಎಂದು ವಿಷಾದಿಸಿದರು.

“ಕೇಂದ್ರ ಸರ್ಕಾರದ ನಡೆವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು, ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬೇಜಾವಬ್ದಾರಿಯಿಂದ ವರ್ತಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಸರ್ಕಾರದ ನಿಲುವುಗಳು ಬಹಳ ಅನುಮಾನಸ್ಪದವಾಗಿ ಕಾಣುತ್ತಿದೆ. ದೊಡ್ಡ ಮಟ್ಟದ ಹಗರಣವಾಗಿದೆ ಎಂದು ಪಕ್ಷಾತೀತವಾಗಿ ಬೀದಿಗಿಳಿದು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹೋರಾಟ ಮಾಡುತ್ತಿದ್ದಾರೆ. ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂಬುದು ಬಹುತೇಕ ರಾಜ್ಯಗಳ ಒಕ್ಕೋರಲಿನ ಬೇಡಿಯಾಗಿದೆ. ಈ ಮನವಿಯನ್ನು ಪರಿಷ್ಕರಿಸದೆ ಮೌನಕ್ಕೆ ಜಾರಿಯಾಗಿರುವುದನ್ನು ಗಮನಿಸಿದರೆ ಕೇಂದ್ರದ ಮೇಲೆ ಸಂಶಯಾಸ್ಪದವಾಗಿದೆ” ಎಂದು ಅನುಮಾನ ವ್ಯಕ್ತಪಡಿಸಿದರು.

“ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂಕೋರ್ಟ್ ತೀರ್ಪು ಆಗಬೇಕು” ಎಂದು ಹೇಳಿದರು.

“ತಮಿಳುನಾಡು ಸರ್ಕಾರ ಅದರ ಭಾವನೆ ಹೇಳಿದೆ. ನಾವು ಕರ್ನಾಟಕದಲ್ಲಿ ಇದೇ ರೀತಿ ಮಾಡಬೇಕಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...