ನೇಹಾ ಹತ್ಯೆ ಪ್ರಕರಣ | ಕೆಎಫ್‍ಡಿ, ಪಿಎಫ್‍ಐ ಸಂಘಟನೆ ಜೊತೆ ಆರೋಪಿ ಸಂಪರ್ಕ ಇತ್ತೇ ಎಂಬುದು ತನಿಖೆಯಾಗಲಿ: ಆರ್.ಅಶೋಕ್

Date:

Advertisements

ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಯಾಕೆ ಇದನ್ನು ಮಾಡಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್ ಇತ್ತೇ? ಕೆಎಫ್‍ಡಿ, ಪಿಎಫ್‍ಐನಂಥ ಸಮಾಜವಿರೋಧಿ ಸಂಘಟನೆ ಜೊತೆ ಸಂಪರ್ಕ ಇತ್ತೇ? ಎಂದು ಮಾಹಿತಿ ಪಡೆಯಬೇಕಿತ್ತು” ಎಂದು ಆಗ್ರಹಿಸಿದರು.

“ಗೃಹ ಸಚಿವರು, ಪೊಲೀಸ್ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್ ಅಲರ್ಟ್ ಇರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೇಳಬೇಕಿತ್ತಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿತ್ತಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ಕೈಗೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ?” ಎಂದು ಕೇಳಿದರು.

“ಇದೊಂದು ವಿಶೇಷ ಪ್ರಕರಣವಾಗಿದ್ದರೂ ಲವ್ ಜಿಹಾದ್ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಆರೋಪಿಸಿದರು. ಸರಕಾರವು ನೊಂದ ಕುಟುಂಬವು ಸಿಬಿಐಗೆ ಕೊಡಿ ಎಂದರೆ ಕೊಡಬೇಕು. ಸಿಐಡಿಗೆ ಅಥವಾ ಎಸ್‍ಐಟಿಗೆ ಕೊಡಿ ಎಂದರೂ ಕೊಡಬೇಕಿತ್ತು. ಇದು ಸಾಮಾನ್ಯ ಜ್ಞಾನ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X