ಗೌರಿಶಂಕರ್‌ ಸೇರ್ಪಡೆ ಬಗ್ಗೆ ನನಗಾಗಲಿ, ಪರಮೇಶ್ವರ್‌ಗಾಗಲಿ ಮಾಹಿತಿ ಇಲ್ಲ: ಕೆ ಎನ್ ರಾಜಣ್ಣ

Date:

  • ‘ನಮ್ಮ ಗಮನಕ್ಕೆ ತರದೆ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ’
  • ‘ನಮ್ಮ ಜಿಲ್ಲೆಯಲ್ಲಿ ಏನೇ ಆದ್ರೂ ನಿಭಾಯಿಸುವ ಶಕ್ತಿ ಜನ ನೀಡಿದ್ದಾರೆ’

ನಮ್ಮ ಗಮನಕ್ಕೆ ತರದೆ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಡಿ ಎಸ್‌ ಗೌರಿಶಂಕರ್ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಸಚಿವ ಕೆ ಎನ್ ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಪೂಜೆಯಲ್ಲಿ ಭಾಗಿಯಾಗಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಜಿಲ್ಲೆಯ ಯಾವ ನಾಯಕರನ್ನೂ ಸಂಪರ್ಕಿಸದೆ ಗೌರಿಶಂಕರ್‌ ಅವರನ್ನು ಸೇರಿಸಿಕೊಂಡಿದ್ದಕ್ಕೆ ಅಸಮಾಧಾನವಿದೆ” ಎಂದರು.

“ಗೌರಿಶಂಕರ್‌ ಅವರ ಸೇರ್ಪಡೆ ಬಗ್ಗೆ ನನಗಾಗಲಿ, ಜಿ ಪರಮೇಶ್ವರ್‌ಗಾಗಲಿ ಜಿಲ್ಲೆಯ ಉಳಿದ ಕಾಂಗ್ರೆಸ್‌ ಶಾಸಕರಿಗಾಗಲಿ ಮಾಹಿತಿ ನೀಡಿಲ್ಲ. ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗಾಗಲಿ ಮಾಹಿತಿ ನೀಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದೀರಾ? ಈ ದಿನ ಸಂಪಾದಕೀಯ | ಇಎಸಿಗೆ ಅದಾನಿ ಆಪ್ತನ ನೇಮಕ; ಪ್ರಧಾನಿ ಮೋದಿ ಯಾರ ಪ್ರಧಾನ ಸೇವಕ?

”ಕಾಂಗ್ರೆಸ್ ಎಂಬುದು ಸಮುದ್ರವಿದ್ದಂತೆ. ಸಮುದ್ರದಲ್ಲಿ ಗಂಗಾ ಮಾತೆಯಷ್ಟು ಪವಿತ್ರ ಜಲವೂ ಬರುತ್ತದೆ. ಪಕ್ಕದ ಚರಂಡಿ ನೀರು ಕೂಡ ಬರುತ್ತೆ, ಸಮುದ್ರದಲ್ಲಿ ಅಮೃತವೂ ಇದೆ, ವಿಷವೂ ಇದೆ. ಅಮೃತ ಸಿಗೋರಿಗೆ ಅಮೃತ ಸಿಗಲಿದೆ. ವಿಷ ಸಿಗೋರಿಗೆ ವಿಷ ಸಿಗುತ್ತದೆ” ಎಂದು ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ರಾಜಣ್ಣ ಮಾರ್ಮಿಕವಾಗಿ ಹೇಳಿದರು.

“ನಮ್ಮ ಜಿಲ್ಲೆಯಲ್ಲಿ ಏನೇ ಆದ್ರೂ ನಿಭಾಯಿಸುವ ಶಕ್ತಿ ಜನ ನೀಡಿದ್ದಾರೆ. ನಮ್ಮ ಜಿಲ್ಲೆಯ ಜನರು ನನಗೆ, ಡಾ. ಜಿ ಪರಮೇಶ್ವರ್‌ಗೆ ಶಕ್ತಿ ಕೊಟ್ಟಿದ್ದಾರೆ. ಎಂತಹ ಸಂದರ್ಭ ಬಂದರೂ ನಿಭಾಯಿಸುತ್ತೇವೆ. ನಾವೇನು ಅಶಕ್ತರಲ್ಲ” ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ...

ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ...

ಜೂನ್ 15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ’: ಸಚಿವ ಡಾ. ಎಚ್ ಕೆ ಪಾಟೀಲ್

ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶ, ಉದ್ಯೋಗ ಸೃಷ್ಟಿಗೆ...

ಮಹಿಳೆಯರ ಕೊಲೆ | ಪೊಲೀಸರ ತನಿಖೆಯಲ್ಲೇ ಲೋಪವಿದೆ: ಬಾಲನ್‌

"ಇತ್ತೀಚೆಗೆ ಹೆಚ್ಚು ಹೆಣ್ಣುಮಕ್ಕಳ ಕೊಲೆಗಳಾಗುತ್ತಿದೆ. ಕೋರ್ಟ್‌ನಲ್ಲೂ ಹಲವು ಪ್ರಕರಣಗಳು ಬಾಕಿ ಇವೆ....