ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

Date:

  • ಬಿಜೆಪಿ ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ
  • ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ: ಗಾಲಿ ಜನಾರ್ದನ ರೆಡ್ಡಿ 

ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಸರ್ಕಾರಕ್ಕೆ ಸಲ್ಲಿಕೆ

ರಾಜಕೀಯಕ್ಕಾಗಿ ಕೌಟುಂಬಿಕ ಸಂಬಂಧ ಕಡಿದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿ, “ರಾಜಕೀಯ, ಸಿದ್ಧಾಂತ ಇಟ್ಟುಕೊಂಡು ನಾನು ಹೋಗುವಾಗ ಯಾವ ಸ್ನೇಹ, ಸಂಬಂಧದ ಪ್ರಶ್ನೆ ಬರುವುದೇ ಇಲ್ಲ. ನನ್ನ ಯೋಚನೆ, ಯೋಜನೆಗಳೇ ಪ್ರತ್ಯೇಕವಾಗಿರುವಾಗ ನನ್ನ ಹಾದಿಯಲ್ಲೇ ನಾನು ಹೋಗುತ್ತೇನೆ” ಎಂದು ಹೇಳಿದರು.

“ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ, ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...