ಕೇರಳ | ಚುನಾವಣೆ ಬಳಿಕ ನೂತನ ಸಿಎಂ ನಿರ್ಧಾರ: ಸಿಪಿಐ ನಾಯಕ ಬಿನೋಯ್ ವಿಶ್ವಂ

Date:

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಎಲ್‌ಡಿಎಫ್ ತನ್ನ ಸತತ ಮೂರನೇ ಸರ್ಕಾರವನ್ನು ರಚಿಸಲಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದು, “ಚುನಾವಣೆಯ ಬಳಿಕ ಹೊಸ ಮುಖ್ಯಮಂತ್ರಿಯನ್ನು ನಿರ್ಧರಿಸಲಾಗುವುದು” ಎಂದು ಹೇಳಿದ್ದಾರೆ.

- Advertisement -

ಚುನಾವಣೆಯಲ್ಲಿ ಗೆದ್ದರೆ ಪಿಣರಾಯಿ ವಿಜಯನ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ಬಿನೋಯ್ ವಿಶ್ವಂ ಚುನಾವಣೆ ಬಳಿಕ ನಿರ್ಧಾರ ಎಂದಿದ್ದಾರೆ. “ಎಲ್‌ಡಿಎಫ್ ಬಹುಮತವನ್ನು ಪಡೆಯುತ್ತದೆ. ಎಲ್‌ಡಿಎಫ್‌ನ ಎಲ್ಲಾ ಪಕ್ಷಗಳು ಸಿಎಂ ಬಗ್ಗೆ ಚರ್ಚಿಸುತ್ತವೆ. ಇಲ್ಲಿ ಸಿಪಿಐಎಂ ಪ್ರಮುಖ ಪಕ್ಷವಾಗಿದೆ ಮತ್ತು ಆದ್ದರಿಂದ ಅವರು ನಿರ್ಧರಿಸುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನು ಓದಿದ್ದೀರಾ? ಕೇರಳ ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕ್ಷಮೆಯಾಚಿಸಿದ ಶಾಸಕ ಪಿವಿ ಅನ್ವರ್

ಇದೇ ಸಂದರ್ಭದಲ್ಲಿ ಕಳೆದ 10 ವರ್ಷಗಳಿಂದ ರಾಜ್ಯವನ್ನು ಆಳುತ್ತಿರುವ ಎಲ್‌ಡಿಎಫ್ ಸರ್ಕಾರದ ಮುಖ್ಯಸ್ಥರಾಗಿರುವ ಸಿಎಂ ವಿಜಯನ್ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದೂ ಎಡಪಕ್ಷದ ನಾಯಕರು ಹೇಳಿದ್ದಾರೆ. “ಅವರು ಅಳವಡಿಸಿಕೊಂಡಿರುವ ನಿಲುವುಗಳು ಮತ್ತು ನೀತಿಗಳು ಖಂಡಿತವಾಗಿಯೂ ಮಹತ್ವದ್ದಾಗಿವೆ” ಎಂದು ಅಭಿಪ್ರಾಯಿಸಿದ್ದಾರೆ.

ಕೇರಳದ 140 ವಿಧಾನಸಭೆ ಕ್ಷೇತ್ರಗಳ ಚುನಾವಣೆಯು 2026ರಲ್ಲಿಯೇ ನಡೆಯಲಿದೆ. ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮೊದಲು ಚುನಾವಣೆ ನಡೆಯಬೇಕಿದೆ. ಚುನಾವಣಾ ಆಯೋಗವು ಅಧಿಕೃತ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ. ಆದರೆ ಏಪ್ರಿಲ್ ಅಥವಾ ಮೇ ತಿಂಗಳಲ್ಲೇ ನಡೆಯುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...