ಗೋಕಾಕ, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಘೋಷಿಸುವ ಸಾಧ್ಯತೆ

Date:

Advertisements

ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್ ಮಂಡಿಸಲಿದ್ದು, ಈ ವೇಳೆ ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳೆಂದು ಘೋಷಿಸುವ ಸಾಧ್ಯತೆ ಇದೆ. ಬಜೆಟ್ ಮಂಡನೆಗೂ ಮುನ್ನ ಈ ಬಗ್ಗೆ ಎಲ್ಲ ವಿವರಗಳನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ವರದಿಯಾಗಿದೆ.

ಚಿಕ್ಕೋಡಿ ಹಾಗೂ ಗೋಕಾಕ ತಾಲೂಕನ್ನು ಹೊಸ ಜಿಲ್ಲೆಗಳನ್ನಾಗಿ ಮಾಡಬೇಕೆಂದು ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳ ಮುಖಂಡರು ಮೂರು ದಶಕಗಳಿಂದ ಒತ್ತಾಯಿಸುತ್ತಲೇ ಇದ್ದಾರೆ. ಆಡಳಿತಾತ್ಮಕ ಉದ್ದೇಶದಿಂದ ಬೈಲಹೊಂಗಲ ಮತ್ತು ಅಥಣಿ ಎರಡು ತಾಲೂಕುಗಳನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕೆಂಬ ಒತ್ತಾಯವೂ ಇದೆ.

Advertisements

1997ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲ್ ಅವರು ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳಾಗಿ ಘೋಷಿಸಲು ಬಹುತೇಕ ಅಧಿಸೂಚನೆಯನ್ನು ಹೊರಡಿಸಿದ್ದರು. ಆದರೆ, ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಮರಾಠಿ ಪ್ರಾಬಲ್ಯವನ್ನು ತಡೆಯಲು ವಿವಿಧ ಕನ್ನಡ ಸಂಘಟನೆಗಳ ಒತ್ತಡದಿಂದಾಗಿ ಜಿಲ್ಲೆಯ ವಿಂಗಡಣೆ ಮಾಡಲಿಲ್ಲ.

“ಸರ್ಕಾರ ಆಡಳಿತ ಅನುಕೂಲಕ್ಕಾಗಿ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು. ಚಿಕ್ಕೋಡಿ ಮತ್ತು ಗೋಕಾಕ ತಾಲೂಕುಗಳನ್ನು ಹೊಸ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ಈ ಎರಡೂ ಪಟ್ಟಣಗಳು ಜಿಲ್ಲಾ ಕೇಂದ್ರವಾಗಲು ಅಗತ್ಯವಿರುವ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಹಿಂದಿವೆ” ಎಂದು ವಿವಿಧ ಸಂಘಟನೆಗಳ ಮುಖಂಡರು ಹೇಳಿದ್ದಾರೆ.

ಚಿಕ್ಕೋಡಿ, ಗೋಕಾಕ ಭಾಗದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮುಖಂಡರು ಕೂಡ ಈ ಎರಡು ತಾಲೂಕುಗಳನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X