ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

Date:

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ ಕಾನೂನು ಜಾರಿಗೆ ಬರಲಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಹೇಳಿದರು.

- Advertisement -

ಗದಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಡವರ, ಸಣ್ಣ ರೈತರ ಪ್ರಕರಣಗಳು ಕೋರ್ಟ್‌ಗಳಲ್ಲಿ ವಿಳಂಬವಾಗದ ರೀತಿಯಲ್ಲಿ ಆದ್ಯತೆ ಮೇರೆಗೆ ಪ್ರಕರಣ ನಡೆಸಬೇಕು. ಆ ಮೂಲಕ 6 ತಿಂಗಳೊಳಗಾಗಿ ಪ್ರಕರಣಗಳು ಪರಿಹರಿಸಬೇಕು ಎಂಬ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ಮಸೂದೆಗೆ ರಾಜ್ಯಪಾಲರು ಅಂಕಿತವನ್ನೂ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಫೆಬ್ರವರಿ 18ರಂದು ರಾಷ್ಟ್ರಪತಿಗಳು ಮಸೂದೆಗೆ ಅಂಕಿತ ಹಾಕಿದ್ದು, ಸರ್ಕಾರ ರಾಜ್ಯಪತ್ರದಲ್ಲಿ ಫೆಬ್ರವರಿ 29ರಂದು ಮಸೂದೆ ಜಾರಿಗೆ ಬರುವಂತೆ ಗೆಜೆಟ್ ನೊಟಿಫಿಕೇಶನ್ ಜಾರಿ ಮಾಡಿದೆ. ಮಾರ್ಚ್‌ 4ರಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಈ ಕಾನೂನು ಬಡವರಿಗೆ ನ್ಯಾಯಾಲಯದಲ್ಲಿ ವಿಶೇಷ ಆದ್ಯತೆ ಮಾಡುವ ದೇಶದ ಮೊದಲ ಕಾನೂನು ಆಗಿದೆ” ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.‌ಎಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ್, ವಾರ್ತಾಧಿಕಾರಿ ವಸಂತ ಮಡ್ಲೂರ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...