ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ಅಧ್ಯಯನ ವರದಿ ನೀಡಲು ತಂಡ ರಚಿಸಿದ ಆರೋಗ್ಯ ಇಲಾಖೆ

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
  • ಆರೋಗ್ಯ ವಿಮೆ ಅಧ್ಯಯನಕ್ಕೆ ಅಧಿಕಾರಿಗಳ ತಂಡ ರಚನೆ
  • ತಮಿಳುನಾಡು, ರಾಜಸ್ತಾನಗಳಿಗೆ ಭೇಟಿ ನೀಡಿ ವರದಿ ತಯಾರಿ

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ವಿಮಾ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿಇತರ ರಾಜ್ಯಗಳಲ್ಲಿನ ಯೋಜನೆಗಳ ಅಧ್ಯಯನ ಮಾಡಿ ವರದಿ ತಯಾರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದೆ.

ಹೆಲ್ತ್ ಕಾರ್ಡ್‌ಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ರಾಜಸ್ತಾನ ಹಾಗೂ ತಮಿಳುನಾಡು ರಾಜ್ಯಗಳಲ್ಲಿರುವ ಮಾದರಿಗಳನ್ನ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಸಚಿವರಿಗೆ ತಿಳಿಸಿದ್ದರು.

ಇದೀಗ ಸಿಎಂ ಮಾರ್ಗದರ್ಶನದ ಮೇರೆಗೆ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಜ್ಞರ ತಂಡ ರಚಿಸಿ ರಾಜಸ್ತಾನ ಹಾಗೂ ತಮಿಳುನಾಡಿನಲ್ಲಿ ಆರೋಗ್ಯ ವಿಮೆ ಮಾದರಿ ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ನಾಲ್ವರು ಅಧಿಕಾರಿಗಳನ್ನು ನಾಮ ನಿರ್ದೇಶನ ಮಾಡಿದ್ದು, ಜುಲೈ 10 ರೊಳಗೆ ಅಧ್ಯಯನದ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಆರೋಗ್ಯ ಇಲಾಖೆ ಜಂಟಿ ನಿರ್ದೇಶಕಿ ಡಾ. ಭಾನುಮೂರ್ತಿ, ಎಮ್.ಎಮ್ ನಿರ್ದೇಶಕರಾದ ಡಾ ಸುರೇಶ್ ಶಾಸ್ತ್ರಿ, ಎಂ.ಎಸ್ ರೂಪಾ, ಹಣಕಾಸು ವಿಭಾಗದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಟಿ ಅವರ ಹೆಸರುಗಳು ಅಧ್ಯಯನ ತಂಡಕ್ಕೆ ನಾಮನಿರ್ದೇಶನಗೊಂಡಿದೆ.

ಈ ತಂಡವು ಇದೇ ತಿಂಗಳ 27, 28 ರಂದು ರಾಜಸ್ತಾನಕ್ಕೆ ಭೇಟಿ ನೀಡಲಿದ್ದು, ಜುಲೈ 6 ಮತ್ತು 7 ರಂದು ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿಯ ಆರೋಗ್ಯ ವಿಮಾ ಮಾದರಿಯ ಕುರಿತು ಅಧ್ಯಯನ ನಡೆಸಲಿದೆ. ಜುಲೈ 10 ರಂದು ರಾಜ್ಯ ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಸಲಿದೆ.

ಈ ಸುದ್ದಿ ಓದಿದ್ದೀರಾ?:ನೈಸರ್ಗಿಕ ವಿಕೋಪ ನಿರ್ವಹಣೆ; ಸಂಪುಟ ಉಪಸಮಿತಿ ರಚಿಸಿದ ಸರ್ಕಾರ

ವರದಿ ಸಲ್ಲಿಕೆಯ ಬಳಿಕ ರಾಜ್ಯದಲ್ಲಿರುವ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಹೆಚ್ಚು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಗುಂಡೂರಾವ್ ಸಿಎಂ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮುಂದಾಗಲಿದ್ದಾರೆ.

ಪ್ರಸ್ತುತ ಆಯುಷ್ಮಾನ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಯಲ್ಲಿ ರಾಜ್ಯ ಸರ್ಕಾರ ಶೇ 64 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದ್ದು, ಕೇಂದ್ರ ಸರ್ಕಾರದಿಂದ ಶೇ 34 ರಷ್ಟು ಮಾತ್ರ ಹಣಕಾಸಿನ ಲಭ್ಯತೆ ದೊರೆಯುತ್ತಿದೆ.

ಈ ಯೋಜನೆಯ ಹೆಲ್ತ್‌ಕಾರ್ಡ್‌ನಲ್ಲಿ ಚಿಕಿತ್ಸೆ ಪಡೆದ ಬಳಿಕ ಖಾಸಗಿ ಆಸ್ಪತ್ರೆಗಳಿಗೆ ಎರಡು ವಾರದೊಳಗೆ ಚಿಕಿತ್ಸಾ ವೆಚ್ಚ ತಲುಪುವಂತೆ ವಿಧಾನ ಜಾರಿಗೆ ತರಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here