ಪತಿ ಎದುರೇ ನವವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರ, ಎಂಟು ಮಂದಿಗೆ ಜೀವಾವಧಿ ಶಿಕ್ಷೆ

Date:

ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಟು ಮಂದಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವ ಇರುವವರೆಗೂ ಸೆರೆವಾಸದ ಶಿಕ್ಷೆ ವಿಧಿಸಿ ಆದೇಶಿಸಿದೆ.

- Advertisement -

2024 ಅಕ್ಟೋಬರ್‌ನಲ್ಲಿ ಈ ಅತ್ಯಾಚಾರ ಘಟನೆ ನಡೆದಿದ್ದು, ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ದಾಖಲೆಯಲ್ಲಿರುವ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಎಂಟು ಜನ ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನ್ಯಾಯಾಧೀಶೆ ಪದ್ಮಾ ಜಾತವ್ ಎಂಟು ಆರೋಪಿಗಳಾದ ರಾಮಕಿಶನ್, ಗರುಡ್ ಕೋರಿ, ರಾಕೇಶ್ ಗುಪ್ತಾ, ಸುಶೀಲ್ ಕೋರಿ, ರಜನೀಶ್ ಕೋರಿ, ದೀಪಕ್ ಕೋರಿ, ರಾಜೇಂದ್ರ ಕೋರಿ ಮತ್ತು ಲವ್‌ಕುಶ್ ಕೋರಿ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ, ಪ್ರತಿಯೊಬ್ಬ ಅಪರಾಧಿಗೂ ತಲಾ ₹2,30,000 ದಂಡ ವಿಧಿಸಿದೆ.

ನವವಿವಾಹಿತ ದಂಪತಿಯನ್ನು ಅಪಹರಿಸಿದ್ದ ಅಪರಾಧಿಗಳ ಪೈಕಿ ಆರು ಮಂದಿ ಪತಿಯ ಮುಂದೆಯೇ ಅತ್ಯಾಚಾರ ಎಸಗಿದ್ದರು. ಮದ್ಯ ಸೇವಿಸಿದ್ದ ಅಪರಾಧಿಗಳು ಸರದಿಯಂತೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದರು. ಗುದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರದೇಶದಲ್ಲಿ 2024ರ ಅಕ್ಟೋಬರ್ 21ರಂದು ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...