ಚೀನಾ ಪರ ಪ್ರಚಾರಕ್ಕಾಗಿ ತಮ್ಮ ನ್ಯೂಸ್ ವೆಬ್‌ಸೈಟ್‌ಗೆ ಹಣ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಚೀನಾ ಪರ ಪ್ರಚಾರ ನಡೆಸಲು ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ನ್ಯೂಸ್‌ಕ್ಲಿಕ್ ಹಣ ಪಡೆಯುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಲೇಖನಗಳ ಮೂಲಕ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆಗಸ್ಟ್ 17ರಂದು ಎಫ್ಐಆರ್ ದಾಖಲಿಸಿದ್ದರು.
ಆಗಸ್ಟ್ 17ರಂದು ದಾಖಲಿಸಿದ್ದ ಎಫ್‌ಐಆರ್ ಹಿನ್ನೆಲೆಯಲ್ಲಿ ಅ.3ರ ಮಂಗಳವಾರ ಬೆಳಗ್ಗೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕಕ್ಕೆ ದಾಳಿ ನಡೆಸಿ, ಶೋಧ ನಡೆಸಿತ್ತು. ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿತ್ತು.
Delhi court remands Newsclick founder and editor Prabir Purkayastha to seven days of police custody.
— Bar & Bench (@barandbench) October 4, 2023
Amit Chakravarty, the HR head of the news portal, has also been remanded to 7 days custody.
Purkayastha and Chakravarty were arrested yesterday by Delhi Police under… pic.twitter.com/LAbAJolGP2
ಆದರೆ, ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿರುವುದಾಗಿ ಮಂಗಳವಾರ ಸಂಜೆ ಮಾಹಿತಿ ನೀಡಿದ್ದರು.
“ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ವಿನಂತಿಸಿದ್ದೆವು. ಹಾಗಾಗಿ, ನ್ಯಾಯಾಲಯವು ಏಳು ದಿನ ಕಸ್ಟಡಿಗೆ ನೀಡಿದೆ” ಎಂದು ದೆಹಲಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#NewsClickRaids | वरिष्ठ पत्रकार परंजॉय गुहा ठाकुरता से करीब 10 घंटे तक पूछताछ की गई.
— Newslaundry Hindi (@nlhindi) October 3, 2023
उनका कहना है कि उनसे कई तरह के सवाल किए गए यह भी पूछा गया कि क्या उन्होंने दिल्ली दंगों और किसान आंदोलन को किया था? pic.twitter.com/F749neCP5r
ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಪೋರ್ಟಲ್ ಹಣವನ್ನು ಪಡೆದಿರುವ ಆರೋಪದ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯ ನಂತರ ನ್ಯೂಸ್‌ಕ್ಲಿಕ್ ಕಚೇರಿಯನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ಜಪ್ತಿ ಮಾಡಿದ್ದರು.