ಯುಎಪಿಎ ಪ್ರಕರಣ: ಬಂಧಿತ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್, ಅಮಿತ್ ಚಕ್ರವರ್ತಿ ಏಳು ದಿನ ಪೊಲೀಸ್ ಕಸ್ಟಡಿಗೆ

Date:

ಚೀನಾ ಪರ ಪ್ರಚಾರಕ್ಕಾಗಿ ತಮ್ಮ ನ್ಯೂಸ್ ವೆಬ್‌ಸೈಟ್‌ಗೆ ಹಣ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್‌ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ಚೀನಾ ಪರ ಪ್ರಚಾರ ನಡೆಸಲು ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ನ್ಯೂಸ್‌ಕ್ಲಿಕ್‌ ಹಣ ಪಡೆಯುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಲೇಖನಗಳ ಮೂಲಕ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆಗಸ್ಟ್ 17ರಂದು ಎಫ್ಐಆರ್ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆಗಸ್ಟ್ 17ರಂದು ದಾಖಲಿಸಿದ್ದ ಎಫ್‌ಐಆರ್ ಹಿನ್ನೆಲೆಯಲ್ಲಿ ಅ.3ರ ಮಂಗಳವಾರ ಬೆಳಗ್ಗೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕಕ್ಕೆ ದಾಳಿ ನಡೆಸಿ, ಶೋಧ ನಡೆಸಿತ್ತು. ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿತ್ತು.

ಆದರೆ, ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್‌ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿರುವುದಾಗಿ ಮಂಗಳವಾರ ಸಂಜೆ ಮಾಹಿತಿ ನೀಡಿದ್ದರು.

“ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ವಿನಂತಿಸಿದ್ದೆವು. ಹಾಗಾಗಿ, ನ್ಯಾಯಾಲಯವು ಏಳು ದಿನ ಕಸ್ಟಡಿಗೆ ನೀಡಿದೆ” ಎಂದು ದೆಹಲಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಪೋರ್ಟಲ್ ಹಣವನ್ನು ಪಡೆದಿರುವ ಆರೋಪದ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯ ನಂತರ ನ್ಯೂಸ್‌ಕ್ಲಿಕ್ ಕಚೇರಿಯನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ಜಪ್ತಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...