ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

Date:

Advertisements

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 17ರ ಮಂಗಳವಾರ ಸಂಜೆ 4 ಗಂಟೆಗೆ ಕಲಬುರಗಿಯ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆಸಲು ಉದ್ಧೇಶಿಸಲಾಗಿದೆ ಎಂದು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ವಿಶೇಷವಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisements
ಕಲಬುರಗಿ 16

ಈ ಸಂಬಂಧ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು‌ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಸಂವಿಧಾನ ಕಲಂ 371ಕ್ಕೆ ತಿದ್ದುಪಡಿ ತಂದು ಜೆ ಸೇರಿಸಿ ಶಿಕ್ಷಣ, ಉದ್ಯೋಗ ಹಾಗೂ ಅನುದಾನ ಒದಗಿಸಿಕೊಡುವುದಕ್ಕೆ ವಿಶೇಷ ಸ್ಥಾನಮಾನ ಜಾರಿಗೆ ಬಂದು ದಶಕಗಳು‌ ಕಳೆದಿದೆ. ಈ ಈ ಸಂದರ್ಭದಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಈ ಭಾಗದ ಅಭಿವೃದ್ದಿಗೆ ಸಹಕಾರಿಯಾಗುವಂತಹ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟ ಕಲಬುರಗಿ ಗೆ ಆಗಮಿಸುತ್ತಿರುವುದು ಹರ್ಷ ತಂದಿದೆ. ನನ್ನ ಮನವಿಗೆ ಓಗೊಟ್ಟು ಸಭೆ ನಡೆಸಲು ಒಪ್ಪಿರುವ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ನನ್ನ,‌ನಮ್ಮ ಭಾಗದ ಎಲ್ಲ ಶಾಸಕರ ಹಾಗೂ ಈ ಭಾಗದ ಎಲ್ಲ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ” ಎಂದು ಖರ್ಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಹಿರಿಯ ತುಳು ಕಲಾವಿದ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ!

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದರಿಂದ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯದಂತ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಮತ್ತು ಇದರಿಂದ ಮಹತ್ತರ ಬೆಳವಣಿಗೆಯಾಗಲಿದೆ. ಈ ಭಾಗದ ಅಭಿವೃದ್ದಿಗೆ ನಾನು ಹಾಗೂ ನಮ್ಮ‌ ಸರ್ಕಾರ ಸದಾ ಕಟಿಬದ್ಧವಾಗಿದ್ದು, ಉದ್ದೇಶಿತ ಸಭೆ ನಮ್ಮೆಲ್ಲ ಆಶೋತ್ತರಗಳಿಗೆ ಸ್ಪಂದಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X