ಯಾವುದೇ ಕಿಡಿಗೇಡಿಗಳ ವಿರುದ್ಧ ತಲೆಕೆಡಿಸಿಕೊಳ್ಳಬೇಡಿ; ಪ್ರೀತಂ ಗೌಡ ವಿರುದ್ಧ ನಿಖಿಲ್ ಪರೋಕ್ಷ‌ ವಾಗ್ದಾಳಿ

Date:

ಯಾರೇ ಕಿಡಿಗೇಡಿಗಳು ಬಂದು ಏನೇ ಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳಬಾರದು. ನಮ್ಮ ಉದ್ದೇಶ ಪಾದಯಾತ್ರೆ, ನಮ್ಮ ಹೋರಾಟ ಮುಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಬಿಜೆಪಿಯ ಪ್ರೀತಂಗೌಡ ಅವರನ್ನು ಕುಟುಕಿ ಮಾತನಾಡಿದರು.

- Advertisement -

ಪಾದಯಾತ್ರೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಿನ್ನೆ ನಡೆದ ಘಟನೆಯ ಬಗ್ಗೆ ನಮ್ಮ ನಾಯಕರು ಮತ್ತು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸಂಬಂಧ ತುಂಬಾ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬಾರದು, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತನೆ ಮಾಡಬೇಕು” ಎಂದು ಹೇಳಿದರು.

“ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ರಿಯಾಕ್ಟ್ ಮಾಡಬೇಡಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು ಇದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

“ಈ ಘಟನೆ ಬಗ್ಗೆ ಕೋ ಆರ್ಡಿನೇಷನ್ ಕಮಿಟಿಯ ಎರಡು ಪಕ್ಷದ ಸದಸ್ಯರು ಈ ಘಟನೆಯ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಅನ್ನೋದು ನೋಡೋಣ” ಎಂದು ತಿಳಿಸಿದರು.

“ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜೊತೆ ಹೆಜ್ಜೆ ಹಾಕುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...