ಚನ್ನಪಟ್ಟಣ ಉಪಚುನಾವಣೆ | ‌ಮ‌ತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ನಿಖಿಲ್‌ ಕುಮಾರಸ್ವಾಮಿ

Date:

Advertisements

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯನ್ನಾಗಿ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಜಂಟಿಯಾಗಿ ಘೋಷಿಸಿದರು.

ನಿಖಿಲ್‌ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‌ ವಿರುದ್ಧ ಸೋಲು ಅನುಭವಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

Advertisements

ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಸೇರಿ, ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿ ತಂತ್ರಗಳೆಲ್ಲ ತಲೆಕೆಳಗಾಗಿವೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿದ್ದು, ಇಂದು (ಅ.24) ಅಭ್ಯರ್ಥಿ ಆಯ್ಕೆ ಸಂಬಂಧ ಯಡಿಯೂರಪ್ಪ ಅವರ ಮನೆಯಲ್ಲಿ ಇದೇ ಮೊದಲ ಬಾರಿಗೆ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಸಮನಯ್ವ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಬಿ ಎಸ್ ಯಡಿಯೂರಪ್ಪ‌, ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಾಯರು ಸೇರಿ ಸಭೆಯಲ್ಲಿ ಭಾಗಿಯಾಗಿದ್ದರು.

ಅಭ್ಯರ್ಥಿ ಆಯ್ಕೆ ಪಟ್ಟಿಯಲ್ಲಿ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ‌, ಸಂಸದ ಡಾ. ಸಿ‌ ಎನ್ ಮಂಜುನಾಥ್‌ ಅವರ ಪತ್ನಿ ಅನುಸೂಯಾ ಸೇರಿದಂತೆ ಇನ್ನೂ ಕೆಲವರ ಹೆಸರು ಇದ್ದವು. 

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರು ಪ್ಲೆ ಕಾರ್ಡ್ ಹಿಡಿದುಕೊಂಡು ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಕೊಡುವಂತೆ ಆಗ್ರಹಿಸಿದರು. ಜೆಪಿ ಭವನದಲ್ಲಿ ಸೇರಿದ್ದ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತತು ಬೇಕೇ ಬೇಕು ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಬೇಕು ಎಂದು ಆಗ್ರಹಿಸಿದ್ದರು.

WhatsApp Image 2024 10 24 at 3.39.38 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X