- ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ
- ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಶನಿವಾರ ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯವಾಗಿ ಸಕ್ರಿಯ ಆದಂತೆ ಕಾಣುತ್ತಿದ್ದು, ಭೇಟಿ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಪಾಠ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ಯೋಗಿ ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, “ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ –ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು” ಎಂದು ತಿಳಿಸಿದ್ದಾರೆ.
“ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ” ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @myogiadityanath ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.1/2 pic.twitter.com/aEIlGIdaSI— Nikhil Kumar (@Nikhil_Kumar_k) October 28, 2023