ನಿಖಿಲ್ ರೋಡ್ ಶೋ | ನೀತಿ ಸಂಹಿತೆ ಉಲ್ಲಂಘನೆ, ಆಯೋಜಕರಿಗೆ ನೋಟಿಸ್‌, ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

Date:

Advertisements

ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿದ್ದಾರೆ. ಕಾಂಗ್ರೆಸ್‌ನವರು ಯಾವ ಚುನಾವಣೆ ನಡೆಸಲು ಹೋಗ್ತಿದ್ದಾರೆ? ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೋಟಿಸ್‌ ಕೊಟ್ಟಿದ್ದಾರೆ. ಕಾಂಗ್ರೆಸ್‌ನವರು ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎ‌ನ್‌ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ” ಎಂದರು.

“ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲಾ ಕೇಸ್ ಹಾಕಿಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ ಇವರು. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ. ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆ” ಎಂದು ಗುಡುಗಿದರು.

Advertisements

“ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೋಟಿಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲರೂ ಚನ್ನಪಟ್ಟಣಕ್ಕೆ ಹೋಗಿದ್ದರಲ್ಲವೇ? ಹಾಗಿದ್ದರೆ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ ಎಂದು ಪ್ರಶ್ನಿಸಿದರು.

“ನಾವು ಮೂರೂ ಕ್ಷೇತ್ರ ಗೆದ್ದಾಗಿದೆ ಎಂದು ಸಿಎಂ ಹೇಳುತ್ತಿದ್ದಾರೆ. ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಅಂದಿದ್ದಾರೆ. ಪಾಪ, ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ, ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಏನಿದು ಪ್ರಕರಣ

ಉಪ ಚುನಾವಣೆಯ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಷೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ಆಯೋಜಕರಿಗೆ ನೋಟಿಸ್‌ ನೀಡಿದ್ದಾರೆ.

ರೋಡ್ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು ಖಾಸಗಿ 96 ಬಸ್‌ಗಳಲ್ಲಿ ಜನರನ್ನು ಕರೆತರಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಬಸ್‌ಗಳಿಗೆ ಅನುಮತಿ ಪಡೆಯದಿರುವುದು ಕಂಡುಬಂತು. ಹಾಗಾಗಿ, ಆಯೋಜಕರು ಹಾಗೂ ಬಸ್‌ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಸಿಆ‌ರ್ ಕೂಡ ಮಾಡಿಕೊಳ್ಳಲಾಗಿದೆ. ಇಂದು ನ್ಯಾಯಾಲಯದ ಅನುಮತಿ ಪಡೆದು, ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X